

ಬೆಟ್ಟದಪುರ: ಏಕ್ ದಿನ್, ಏಕ್ ಘಂಟಾ, ಏಕ್ ಸಾಥ್ ಚಟುವಟಿಕೆಯ ಅಂಗವಾಗಿ ಗುರುವಾರ ಬೆಟ್ಟದಪುರ ಗ್ರಾಮ ಪಂಚಾಯಿತಿ ಆವರಣದಲ್ಲಿ ತಾಲೂಕು ಮಟ್ಟದ ಶ್ರಮದಾನ ಹಾಗೂ ಜಾಥಾ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಬೆಟ್ಟದಪುರ ಹೋಬಳಿ ವ್ಯಾಪ್ತಿಯ ವಿವಿಧ ಗ್ರಾಮ ಪಂಚಾಯಿತಿಗಳ ಸಿಬ್ಬಂದಿ, ನೀರುಘಂಟಿಗಳು, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು, ಘನ ತ್ಯಾಜ್ಯ ನಿರ್ವಹಣಾ ಸಿಬ್ಬಂದಿ ಸೇರಿದಂತೆ ವಿವಿಧ ಇಲಾಖೆಗಳ ಸಿಬ್ಬಂದಿ ಭಾಗವಹಿಸಿ ಸ್ವಚ್ಛತಾ ಕಾರ್ಯದಲ್ಲಿ ಕೈಜೋಡಿಸಿದರು.
ಬೆಟ್ಟದಪುರ ಪಿಡಿಒ ಮಂಜುನಾಥ್ ಮಾತನಾಡಿ, ಸ್ವಚ್ಛತೆ ಎನ್ನುವುದು ಕೇವಲ ಒಂದು ದಿನದ ಕಾರ್ಯಕ್ರಮಕ್ಕೆ ಸೀಮಿತವಾಗಬಾರದು. ಗ್ರಾಮದಲ್ಲಿ ಸ್ವಚ್ಛತೆ ಹಾಗೂ ತ್ಯಾಜ್ಯ ವಿಲೇವಾರಿ ಕುರಿತು ಪ್ರತಿಯೊಬ್ಬರೂ ಜವಾಬ್ದಾರಿ ವಹಿಸಬೇಕು. ಸಾರ್ವಜನಿಕರು ತಮ್ಮ ಮನೆ ಹಾಗೂ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವುದರೊಂದಿಗೆ ತ್ಯಾಜ್ಯವನ್ನು ವಿಂಗಡಿಸಿ ಪಂಚಾಯಿತಿಗೆ ಸಹಕರಿಸಬೇಕು. ಸ್ವಚ್ಛ ಗ್ರಾಮ ನಿರ್ಮಾಣಕ್ಕೆ ಜನರ ಸಹಭಾಗಿತ್ವ ಅತ್ಯಂತ ಮುಖ್ಯ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಸಮಾಲೋಚಕ ಪ್ರದೀಪ್ ಕುಮಾರ್, ಪಿಡಿಒ ಅಭಿ ಅಹ್ಮದ್, ಲೆಕ್ಕ ಸಹಾಯಕರಾದ ಶ್ರೀನಿಧಿ, ಶ್ರೀನಿವಾಸ್, ಐಟಿಸಿ ಕಂಪನಿಯ ಉಮೇಶ್, ಸತೀಶ್, ಆರೋಗ್ಯ ನಿರೀಕ್ಷಕ ಮಹದೇವ್ ಸೇರಿದಂತೆ ವಿವಿಧ ಇಲಾಖೆಗಳ ಸಿಬ್ಬಂದಿ ಭಾಗವಹಿಸದ್ದರು.