ರಾಮಾಯಣದ ಮಾನವೀಯ ಮೌಲ್ಯ ಅಳವಡಿಸಿಕೊಳ್ಳಿ

ಯುವಕರಿಗೆ ಸೌಮ್ಯಾ ಅನಿಲ್ ಚಿಕ್ಕಮಾದು ಸಲಹೆ
ಸರಗೂರು: ಮಹರ್ಷಿ ವಾಲ್ಮೀಕಿ ಅವರು ರಚಿಸಿದ ರಾಮಾಯಣದಲ್ಲಿ ಮನುಷ್ಯ ತನ್ನ ಜೀವನದಲ್ಲಿ ಅಳವಡಿಸಿಕೊಳ್ಳಬೇಕಾದ ಮಾನವೀಯ ಮೌಲ್ಯಗಳನ್ನು ಸಾರಿದ್ದು, ಯುವಕರು ಅವರ ತತ್ವ, ಆದರ್ಶಗಳನ್ನು ಅಳವಡಿಸಿಕೊಳ್ಳಬೇಕು ಎಂದು ಶಾಸಕ ಅನಿಲ್ ಚಿಕ್ಕಮಾದು ಪತ್ನಿ ಸೌಮ್ಯಾ ಅನಿಲ್ ಚಿಕ್ಕಮಾದು ಸಲಹೆ ನೀಡಿದರು.
ಸರಗೂರು ತಾಲೂಕಿನ ಪಟ್ಟಣದ ಜಯಚಾಮರಾಜೇಂದ್ರ ಕ್ರೀಡಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ವಾಲ್ಮೀಕಿ ಜಯಂತಿ ಸಮಾರಂಭವನ್ನು ಗಣ್ಯರು ಉದ್ಘಾಟಿಸಿದರು. ಸೌಮ್ಯಾ ಅನಿಲ್ ಚಿಕ್ಕಮಾದು, ಪ್ರೊ.ಬಿ.ನಂಜುಂಡಸ್ವಾಮಿ, ಎನ್.ಬೆಳ್ತೂರು ನಿಂಗರಾಜು ಮತ್ತಿತರರಿದ್ದರು.
Published on: 

ಸರಗೂರು: ಮಹರ್ಷಿ ವಾಲ್ಮೀಕಿ ಅವರು ರಚಿಸಿದ ರಾಮಾಯಣದಲ್ಲಿ ಮನುಷ್ಯ ತನ್ನ ಜೀವನದಲ್ಲಿ ಅಳವಡಿಸಿಕೊಳ್ಳಬೇಕಾದ ಮಾನವೀಯ ಮೌಲ್ಯಗಳನ್ನು ಸಾರಿದ್ದು, ಯುವಕರು ಅವರ ತತ್ವ, ಆದರ್ಶಗಳನ್ನು ಅಳವಡಿಸಿಕೊಳ್ಳಬೇಕು ಎಂದು ಶಾಸಕ ಅನಿಲ್ ಚಿಕ್ಕಮಾದು ಪತ್ನಿ ಸೌಮ್ಯಾ ಅನಿಲ್ ಚಿಕ್ಕಮಾದು ಸಲಹೆ ನೀಡಿದರು.

ಪಟ್ಟಣದ ಜಯಚಾಮರಾಜೆಂದ್ರ ಕ್ರೀಡಾಂಗಣದಲ್ಲಿ ಮಂಗಳವಾರ ತಾಲೂಕು ಆಡಳಿತ ಹಾಗೂ ತಾಲೂಕು ನಾಯಕ ಸಂಘದಿಂದ ಆಯೋಜಿಸಿದ್ದ ವಾಲ್ಮೀಕಿ ಜಯಂತಿ ಸಮಾರಂಭ ಉದ್ಘಾಟಿಸಿ ಮತ್ತು ವಾಲ್ಮೀಕಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಅವರು ಮಾತನಾಡಿದರು.

ವಾಲ್ಮೀಕಿ ಅವರು ಒಂದು ಸಮುದಾಯಕ್ಕೆ ಸಿಮೀತವಾಗಿರಲಿಲ್ಲ. ಸರ್ವರಿಗೂ ಅನುಕೂಲವಾಗುವ ನಿಟ್ಟಿನಲ್ಲಿ ಮಹಾಕಾವ್ಯ ರಚಿಸಿದರು. ಗ್ರಾಮೀಣ ಪ್ರದೇಶದ ಮಕ್ಕಳು ಜೀವನದಲ್ಲಿ ಉತ್ತಮ ಸಾಧನೆ ಮಾಡಿ ಉನ್ನತ ಹುದ್ದೆ ಅಲಂಕರಿಸಬೇಕು. ಆ ಮೂಲಕ ತಾಲೂಕಿನ ಕೀರ್ತಿಯನ್ನು ಎಲ್ಲೆಡೆ ಪಸರಿಸಬೇಕು ಎಂದರು.

ಪಿರಿಯಾಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರೊ.ಬಿ.ನಂಜುಂಡಸ್ವಾಮಿ ಮಾತನಾಡಿ, ಮಹರ್ಷಿ ವಾಲ್ಮೀಕಿ ಅವರು ಜಗತ್ತಿನ ಶ್ರೇಷ್ಠ ಕವಿ. ಇವರು ಮೂರು ಸಾವಿರ ವರ್ಷಗಳಿಂದ ಭಾರತವನ್ನು ಕಾಪಾಡಿದ ರಾಮಾಯಣ ಎಂಬ ಮಹಾಕಾವ್ಯ ರಚಿಸಿದರು. ಹೀಗಾಗಿ ಮಕ್ಕಳಿಗೆ ರಾಮಾಯಣದ ಬಗ್ಗೆ ಹೇಳಿಕೊಡಬೇಕು. ಸಮಾಜಕ್ಕೆ ವಾಲ್ಮೀಕಿ ಕೊಡುಗೆ ಅಪಾರವಾಗಿದೆ ಎಂದರು.

ಸಮಾಜ ಸೇವಕ ಉದ್ಯಮಿ ಎನ್.ಬೆಳ್ತೂರು ನಿಂಗರಾಜು ಮಾತನಾಡಿ, ಮಹರ್ಷಿ ವಾಲ್ಮೀಕಿ ಅವರ ಬಗ್ಗೆ ಯುವಕರಲ್ಲಿ ಜಾಗೃತಿ ಮೂಡಿಸಲು ಪ್ರತಿ ಹಳ್ಳಿಗಳಿಗೆ ತೆರಳಿ ತಿಳಿ ಹೇಳಬೇಕು ಎಂದು ಸಲಹೆ ನೀಡಿದರು.

ನಾಯಕ ಸಂಘದ ತಾಲೂಕು ಅಧ್ಯಕ್ಷ ಬಸವನಾಯಕ, ದೊಡ್ಡವೀರನಾಯಕ, ಮಾಜಿ ಶಾಸಕ ಬೀಚನಹಳ್ಳಿ ಚಿಕ್ಕಣ್ಣ ಪುತ್ರ ಜೈಪ್ರಕಾಶ್,

ಮುಖಂಡರಾದ ಶಂಭುಲಿಂಗನಾಯಕ, ಜಿಪಂ ಮಾಜಿ ಸದಸ್ಯ ಪಿ.ರವಿ, ತಾಲೂಕು ನಾಯಕ ಸಂಘದ ಗೌರವಾಧ್ಯಕ್ಷ ಅಗತ್ತೂರು ಅಂಕನಾಯಕ, ಉಪಾಧ್ಯಕ್ಷ ಹಾಗೂ ಕಾಂಗ್ರೆಸ್ ಪಕ್ಷದ ಟೌನ್ ಅಧ್ಯಕ್ಷ ಶ್ರೀನಿವಾಸ್, ಮೈಮುಲ್ ಮಾಜಿ ಅಧ್ಯಕ್ಷ ಕೆ.ಈರೇಗೌಡ, ಎಸ್.ಎ.ನಾಗೇಂದ್ರ, ಜಿನ್ನಹಳ್ಳಿ ರಾಜನಾಯಕ, ಕ್ಯಾತನಹಳ್ಳಿ ನಾಗರಾಜು, ಪುರದಕಟ್ಟೆ ಬಸವರಾಜು, ಇಟ್ನ ಸಿದ್ದರಾಜು, ನಾಗರಾಜು, ತಹಸೀಲ್ದಾರ್ ಮೋಹನಕುಮಾರಿ, ಇಒ ಪ್ರೇಮ್ ಕುಮಾರ್, ವಕೀಲ ಸಂಘದ ಅಧ್ಯಕ್ಷ ನಾಗೇಶ್, ಆದಿಕರ್ನಾಟಕ ಇಟ್ನ ರಾಜಣ್ಣ, ಸೋಮನಾಯಕ, ಬಸಾಪುರ ರವಿ, ಚೆಂಡು ರಮೇಶ್, ಬಿ.ಸಿ.ರಾಜು, ಅಧಿಕಾರಿಗಳಾದ ಮಹೇಶ್, ರಾಜು, ನಾಗರಾಜು ಮತ್ತಿತರರು ಹಾಜರಿದ್ದರು.

ಇದೇ ಸಂದರ್ಭದಲ್ಲಿ ಸಾಹಿತಿ ಸ.ಚ.ಮಹದೇವನಾಯಕ ಅವರಿಗೆ ’ವಾಲ್ಮೀಕಿ ಸೇವಾ ರತ್ನ’ ಪ್ರಶಸ್ತಿ ನೀಡಿ ಅಭಿನಂದಿಸಲಾಯಿತು. ಅಲ್ಲದೆ ಎಸ್ಸೆಸ್ಸೆಲ್ಸಿ, ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಅಭಿನಂದಿಸಲಾಯಿತು.

ಕಾರ್ಯಕ್ರಮಕ್ಕೂ ಮೊದಲು ಪಟ್ಟಣದ ಕೆಇಬಿ ಕಚೇರಿ ಮುಂಭಾಗದಲ್ಲಿ ಬೆಳ್ಳಿ ರಥದಲ್ಲಿ ಮಹರ್ಷಿ ವಾಲ್ಮೀಕಿ ಪುತ್ಥಳಿಯನ್ನು ಪ್ರತಿಷ್ಠಾಪಿಸಿ ವಿವಿಧ ಕಲಾತಂಡಗಳೊಂದಿಗೆ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಮಾಡಲಾಯಿತು.