ವಿವಿಧ ಬೇಡಿಕೆ ಈಡೇರಿಸಲು ಹೋರಾಟ

ಕೂಡ್ಲಪುರ ಗ್ರಾಮಸ್ಥರಿಗೆ ಪ್ರತಿಭಟನೆ
 ಶುದ್ಧ ಕುಡಿಯುವ ನೀರಿನ ಘಟಕ, ಪದವಿ ಪೂರ್ವ ಕಾಲೇಜು, ಹೆಣ್ಣು ಮಕ್ಕಳ ವಿದ್ಯಾರ್ಥಿನಿಲಯ ಸ್ಥಾಪನೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕೂಡ್ಲಪುರ ಗ್ರಾಮಸ್ಥರು ಗ್ರಾಮ ಪಂಚಾಯಿತಿ ಮುಂಭಾಗ ಮಂಗಳವಾರ ಪ್ರತಿಭಟನೆ ನಡೆಸಿದರು.
ಶುದ್ಧ ಕುಡಿಯುವ ನೀರಿನ ಘಟಕ, ಪದವಿ ಪೂರ್ವ ಕಾಲೇಜು, ಹೆಣ್ಣು ಮಕ್ಕಳ ವಿದ್ಯಾರ್ಥಿನಿಲಯ ಸ್ಥಾಪನೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕೂಡ್ಲಪುರ ಗ್ರಾಮಸ್ಥರು ಗ್ರಾಮ ಪಂಚಾಯಿತಿ ಮುಂಭಾಗ ಮಂಗಳವಾರ ಪ್ರತಿಭಟನೆ ನಡೆಸಿದರು.
Published on: 

ನಂಜನಗೂಡು: ಶುದ್ಧ ಕುಡಿಯುವ ನೀರಿನ ಘಟಕ, ಪದವಿ ಪೂರ್ವ ಕಾಲೇಜು, ಹೆಣ್ಣು ಮಕ್ಕಳ ವಿದ್ಯಾರ್ಥಿನಿಲಯ ಸ್ಥಾಪನೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕೂಡ್ಲಪುರ ಗ್ರಾಮಸ್ಥರು ಗ್ರಾಮ ಪಂಚಾಯಿತಿ ಮುಂಭಾಗ ಮಂಗಳವಾರ ಪ್ರತಿಭಟನೆ ನಡೆಸಿದರು.

ಗ್ರಾಮದ ಮುಂಭಾಗ ಜಮಾಣಿಗೊಂಡ ಪ್ರತಿಭಟನಾಕಾರರು, ತಮಟೆ ಬಾರಿಸಿ, ಗ್ರಾಮದ ಪ್ರಮುಖ ಬೀದಿಗಳಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರಲ್ಲದೆ ಗ್ರಾಮ ಪಂಚಾಯಿತಿ ಮುಂಭಾಗ ಧರಣಿ ನಡೆಸಿ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಘೋಷಣೆ ಕೂಗಿದರು.

ಗ್ರಾಮದ ಮುಖಂಡ ಕೆ.ವಿ.ಸಿದ್ದರಾಜು ಮಾತನಾಡಿ, ಕೂಡ್ಲಾಪುರ ದೊಡ್ಡ ಗ್ರಾಮವಾಗಿದೆ. ಹಿಂದುಳಿದ ವರ್ಗಗಳ ಮಕ್ಕಳ ಶಿಕ್ಷಣಕ್ಕೆ ಆದ್ಯತೆ ನೀಡುವ ನಿಟ್ಟಿನಲ್ಲಿ ಪದವಿ ಪೂರ್ವ ಕಾಲೇಜು ಸ್ಥಾಪಿಸಬೇಕು. ಜನಸಂಖ್ಯೆಗೆ ಅನುಗುಣವಾಗಿ ಗ್ರಾಮೀಣ ಶಾಖೆಯ ಬ್ಯಾಂಕ್ ಸ್ಥಾಪನೆ ಮಾಡಬೇಕು. ಹಿಂದುಳಿದ ವರ್ಗಗಳ ಹೆಣ್ಣುಮಕ್ಕಳ ವಿದ್ಯಾರ್ಥಿ ನಿಲಯವನ್ನು ಸ್ಥಾಪಿಸಿ ಶಿಕ್ಷಣಕ್ಕೆ ಒತ್ತು ನೀಡಬೇಕು. ದೊಡ್ಡ ಕವಲಂದೆ ಗ್ರಾಮದಿಂದ ದೂರವಿದ್ದು, ತುರ್ತು ಸಂದರ್ಭದಲ್ಲಿ ಸೇವೆ ಪಡೆಯುವ ಸಲುವಾಗಿ ಪೊಲೀಸ್ ಉಪಠಾಣೆ ಸ್ಥಾಪನೆ ಮಾಡಬೇಕು. ಶುದ್ಧ ಕುಡಿಯುವ ನೀರಿನ ಘಟಕ ದುರಸ್ತಿಪಡಿಸಬೇಕು ಎಂದು ಒತ್ತಾಯಿಸಿದರು.

ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿವೇಕ್ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ಗ್ರಾಮಸ್ಥರಾದ ಗ್ರಾಪಂ ಮಾಜಿ ಅಧ್ಯಕ್ಷೆ ಸುಧಾಮಣಿ ಶಿವರಾಜು, ಮಾಜಿ ಸದಸ್ಯರಾದ ಕೆ.ಎಂ.ಸಿದ್ದರಾಜು, ಮಹದೇವ ಶೆಟ್ಟಿ, ಕಾಳಶೆಟ್ಟಿ, ಮಹದೇವಮ್ಮ, ಮುಖಂಡರಾದ ಮಹದೇವಯ್ಯ, ಶಿವಕುಮಾರ್, ಸಿದ್ದಶೆಟ್ಟಿ, ಗ್ರಾಮ ಪಂಚಾಯಿ ರಾಜು, ಮಾರಶೆಟ್ಟಿ, ಗುರುಲಿಂಗ ನಾಯಕ, ಪುಟ್ಟಮಾದಯ್ಯ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net