ಸರ್ಕಾರದ ಸೌಲಭ್ಯಗಳು ಕಾರ್ಮಿಕರಿಗೆ ತಲುಪಲಿ: ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ಅಧ್ಯಕ್ಷ ಎಚ್.ಎನ್.ಶ್ರೀಧರಮೂರ್ತಿ

ಸನ್ಮಾನ ಸ್ವೀಕಾರ
Government benefits should reach the workers: H.N. Sridharamurthy, President of the Mysuru District Brahmin Youth Forum
ಮೈಸೂರಿನ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ಅಧ್ಯಕ್ಷ ಎಚ್.ಎನ್.ಶ್ರೀಧರಮೂರ್ತಿ ಅವರನ್ನು ಗೌರವಿಸಲಾಯಿತು. ವಿಕ್ರಂ ಅಯ್ಯಂಗಾರ್, ನಿರೂಪಕ ಅಜಯ್ ಶಾಸ್ತ್ರಿ, ಕೆ.ಎಂ.ನಿಶಾಂತ್, ಎಸ್.ಎಸ್.ಮೂರ್ತಿ, ನಾಗೇಂದ್ರ, ದುರ್ಗಾ ಪ್ರಸಾದ್, ಅಮಿತ್ ಇತರರು ಇದ್ದರು.
Published on: 

ಮೈಸೂರು: ಅಖಿಲ ಭಾರತ ಅಸಂಘಟಿತ ಪುರೋಹಿತ ಕಾರ್ಮಿಕರ ಫೆಡರೇಷನ್ ಅಡುಗೆ ಘಟಕದ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡ ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ಅಧ್ಯಕ್ಷ ಎಚ್.ಎನ್.ಶ್ರೀಧರಮೂರ್ತಿ ಅವರನ್ನು ಗೌರವಿಸಲಾಯಿತು.

ನಗರದ ಖಾಸಗಿ ಹೋಟೆಲ್‌ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ಪದಾಧಿಕಾರಿಗಳು ಅಭಿನಂದಿಸಿ ಸನ್ಮಾನಿಸಿದರು.

ಗೌರವ ಸ್ವೀಕರಿಸಿ ಮಾತನಾಡಿದ ಎಚ್.ಎನ್.ಶ್ರೀಧರಮೂರ್ತಿ ಅವರು, ಅಸಂಘಟಿತ ಕಾರ್ಮಿಕರಿಗೆ ಸರ್ಕಾರದಿಂದ ಸರ್ಕಾರದ ಸವಲತ್ತು ಕೊಡಿಸಲು ಸಂಘಟಿತ ಹೋರಾಟ ಮಾಡಲಾಗುವುದು. ಸರ್ಕಾರದ ಸೌಲಭ್ಯಗಳು ಅರ್ಹ ಕಾರ್ಮಿಕರಿಗೆ ಸುಲಭವಾಗಿ ತಲುಪುವಂತಾಗಬೇಕು. ಪ್ರತಿಯೊಬ್ಬ ಅಸಂಘಟಿತ ಕಾರ್ಮಿಕನಿಗೂ ಗೌರವಯುತ ಜೀವನ ನಡೆಸಲು ಅಗತ್ಯವಾದ ನೆರವು ದೊರೆಯಬೇಕು ಎಂಬುದು ನಮ್ಮ ಆಶಯ ಎಂದರು.

ಅಡುಗೆ ಕ್ಷೇತ್ರದಲ್ಲಿ ಕಾರ್ಮಿಕರ ಬದುಕು ಹಸನಾಗಿಸಲು ಸರ್ಕಾರ ವಿಶೇಷ ಗಮನ ಹರಿಸಬೇಕು. ಕಾರ್ಮಿಕರಿಗೆ ಆರೋಗ್ಯ ವಿಮೆ, ಅಪಘಾತ ಪರಿಹಾರ, ಪಿಂಚಣಿ ಸೌಲಭ್ಯ, ಮಕ್ಕಳ ಶಿಕ್ಷಣಕ್ಕೆ ನೆರವು, ಮನೆ ನಿರ್ಮಾಣಕ್ಕೆ ಸಹಾಯಧನ ಹಾಗೂ ಆರ್ಥಿಕ ಭದ್ರತೆ ಒದಗಿಸುವ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಸಮಿತಿ ರಚಿಸಲಾಗುತ್ತಿದೆ ಎಂದು ತಿಳಿಸಿದರು.

ಬ್ರಾಹ್ಮಣ ಯುವ ವೇದಿಕೆಯ ಪ್ರಧಾನ ಕಾರ್ಯದರ್ಶಿ ವಿಕ್ರಂ ಅಯ್ಯಂಗಾರ್, ನಿರೂಪಕ ಅಜಯ್ ಶಾಸ್ತ್ರಿ, ವೇದಿಕೆಯ ಕೆ.ಎಂ. ನಿಶಾಂತ್, ಎಸ್.ಎಸ್.ಮೂರ್ತಿ, ನಾಗೇಂದ್ರ, ದುರ್ಗಾ ಪ್ರಸಾದ್, ಅಮಿತ್, ರಂಗನಾಥ್, ಜಯಸಿಂಹ, ಪ್ರಶಾಂತ್, ಶ್ರೀಕಾಂತ್ ಕಶ್ಯಪ್, ವಿನಯ್ ಕಣಗಾಲ್ ಇತರರು ಇದ್ದರು.