

ಮೈಸೂರು: ಅಪ್ರವರಂಬೆ ರಂಗ ತಂಡವು ರಾಮಕೃಷ್ಣನಗರದ ರಮಾಗೋವಿಂದ ರಂಗಮಂದಿರದಲ್ಲಿ ಸೆ.11ರಂದು ಸಂಜೆ 4.30ಕ್ಕೆ ರಂಗಕರ್ಮಿ ನಾ.ನಾಗಚಂದ್ರ-70 ಅಭಿನಂದನಾ ಕಾರ್ಯಕ್ರಮವನ್ನು ಆಯೋಜಿಸಿದೆ.
ಎಂಡಿಸಿಸಿ ಬ್ಯಾಂಕ್ ಅಧ್ಯಕ್ಷ ಜಿ.ಡಿ ಹರೀಶ್‌ಗೌಡ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮುಡಾ ಮಾಜಿ ಅಧ್ಯಕ್ಷ ಎಚ್.ವಿ.ರಾಜೀವ್ ಅಧ್ಯಕ್ಷತೆ ವಹಿಸಲಿದ್ದಾರೆ. ರಂಗಚಂದ್ರ ಸಾಕ್ಷೃಚಿತ್ರವನ್ನು ವಿಧಾನ ಪರಿಷತ್ ಸದಸ್ಯ ಡಾ.ಡಿ.ತಿಮ್ಮಯ್ಯ ಬಿಡುಗಡೆ ಮಾಡಲಿದ್ದಾರೆ ಎಂದು ರಂಗ ನಿರ್ದೇಶಕ ಯು.ಎಸ್.ರಾಮಣ್ಣ ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಎಂ.ಡಿ.ಸುದರ್ಶನ ಭಾಗವಹಿಸಲಿದ್ದಾರೆ. ವೇದಿಕೆ ಕಾರ್ಯಕ್ರಮದ ಬಳಿಕ ಧರ್ಮದುರಂತ ನಾಟಕ ಪ್ರದರ್ಶನ ನಡೆಯಲಿದೆ ಎಂದರು.
ಕಳೆದ ಐದು ದಶಕಗಳಿಂದ ಮೈಸೂರಿನ ರಂಗಭೂಮಿ ಬೆಳವಣಿಗೆಯಲ್ಲಿ ನಾಗಚಂದ್ರ ತೊಡಗಿಸಿಕೊಂಡಿದ್ದು, ನಿರಂತರ ನಾಟಕಗಳ ನಿರ್ಮಾಣ ಹಾಗೂ ರಂಗ ಸಂಘಟನೆಯಲ್ಲಿ ತೊಡಗಿದ್ದಾರೆ ಎಂದು ತಿಳಿಸಿದರು.
ಗೋಷ್ಠಿಯಲ್ಲಿ ನಾ.ನಾಗಚಂದ್ರ ಹಾಜರಿದ್ದರು.