ಪೌರಕಾರ್ಮಿಕರು ಪಟ್ಟಣದ ಆಸ್ತಿ: ಜುಬೇದಾ

22 nrp 3
Published on

ಎನ್.ಆರ್.ಪುರ: ಸುತ್ತಮುತ್ತಲಿನ ಪರಿಸರವನ್ನು ಪ್ರತಿನಿತ್ಯ ಸ್ವಚ್ಛ ಮಾಡುವ ಪೌರ ಕಾರ್ಮಿಕರು ಪಟ್ಟಣದ ಆಸ್ತಿ ಇದ್ದಂತೆ ಎಂದು ಪಪಂ ಅಧ್ಯಕ್ಷೆ ಜುಬೇದಾ ಹೇಳಿದರು.

ಪಪಂ ಸಭಾಂಗಣದಲ್ಲಿ ಪೌರ ಕಾರ್ಮಿಕರ ದಿನಾಚರಣೆ ಅಂಗವಾಗಿ ಗುರುವಾರ ಪೌರ ಕಾರ್ಮಿಕರಿಗೆ ಆರೋಗ್ಯ ತಪಾಸಾ ಶಿಬಿರ ಉದ್ಘಾಟಿಸಿ ಮಾತನಾಡಿದ ಅವರು, ಪೌರ ಕಾರ್ಮಿಕರು ತಮ್ಮ ಆರೋಗ್ಯದ ಬಗ್ಗೆಯೂ ಗಮನ ನೀಡಬೇಕು ಎಂದು ಸಲಹೆ ನೀಡಿದರು.

ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಪಿ.ಪಿ.ಬೇಬಿ ಮಾತನಾಡಿ, ಮಧುಮೇಹ, ಅಧಿಕ ರಕ್ತದೊತ್ತಡ, ಹೃದಯ ಸಂಬಂಧಿ ಕಾಯಿಲೆ, ಕ್ಯಾನ್ಸರ್ ಬಾರದಂತೆ ಪೌರ ಕಾರ್ಮಿಕರು ಹೆಚ್ಚಿನ ಕಾಳಜಿ ವಹಿಸಬೇಕು. ಕಾಲ ಕಾಲಕ್ಕೆ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಪಪಂ ಸ್ಥಾಯಿ ಅಧ್ಯಕ್ಷ ಪ್ರಶಾಂತಶೆಟ್ಟಿ ಮಾತನಾಡಿ, ಪೌರ ಕಾರ್ಮಿಕರ ಆರೋಗ್ಯ ರಕ್ಷಣೆಗಾಗಿ ಆರೋಗ್ಯ ಶಿಬಿರ ಏರ್ಪಡಿಸಲಾಗಿದೆ. ಪೌರ ಕಾರ್ಮಿಕರು ಇದರ ಉಪಯೋಗ ಪಡೆದುಕೊಳ್ಳಬೇಕು ಎಂದರು.

40ಕ್ಕೂ ಅಧಿಕ ಪೌರಕಾರ್ಮಿಕರು ಆರೋಗ್ಯ ತಪಾಸಣೆ ಮಾಡಿಸಿಕೊಂಡರು. ಪಪಂ ಉಪಾಧ್ಯಕ್ಷೆ ಉಮಾ, ಮುಖ್ಯಾಧಿಕಾರಿ ಎ.ಚಂದ್ರಕಾಂತ್, ಪೌರ ಕಾರ್ಮಿಕರ ಸಂಘದ ಅಧ್ಯಕ್ಷ ಸುರೇಶ್, ವೈದ್ಯ ಡಾ. ಕಾರ್ತಿಕ್, ಲಕ್ಷ್ಮಣಗೌಡ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net