ಪವಿತ್ರ ಮೃತ್ತಿಕೆ ಸಂಗ್ರಹಣೆ ವಿವಿಧ ಗ್ರಾಮಗಳಿಗೆ ಭೇಟಿ

NANJUNDEGOWDA
Published on

ಮಡಿಕೇರಿ: ನಾಡಪ್ರಭು ಕೆಂಪೇಗೌಡರ ೧೦೮ ಅಡಿ ಕಂಚಿನ ಪ್ರತಿಮೆ ಉದ್ಘಾಟನೆ ಸಂಬಂಧ ಪವಿತ್ರ ಮೃತ್ತಿಕೆ ಸಂಗ್ರಹಣೆ ಪ್ರಯುಕ್ತ ಅ೨೭ ಮತ್ತು ೨೮ ರಂದು ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಪವಿತ್ರ ಮೃತ್ತಿಕೆ ಸಂಗ್ರಹಣೆ ಮಾಡಲಾಗುತ್ತದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ ತಿಳಿಸಿದರು.


ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಾಡಪ್ರಭು ಕೆಂಪೇಗೌಡರ ೧೦೮ ಅಡಿ ಕಂಚಿನ ಪ್ರತಿಮೆ ಉದ್ಘಾಟನೆ ಸಂಬಂಧ ಮಂಗಳವಾರ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.


ಅಕ್ಟೋಬರ್ ೨೭ ರಂದು ಬೆಳಗ್ಗೆ ೧೦ ಗಂಟೆಗೆ ನಗರದ ಜಿಲ್ಲಾಡಳಿತ ಭವನ ಆವರಣದಲ್ಲಿ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಿಂದ ಪವಿತ್ರ ಮೃತ್ತಿಕೆ ಸಂಗ್ರಹಣೆಗೆ ಚಾಲನೆ ದೊರೆಯಲಿದೆ. ಬಳಿಕ ಗಾಳಿಬೀಡು, ಕೆ.ನೀಡುಗಣೆ, ಮೇಕೇರಿ, ಹಾಕತ್ತೂರು, ಹೊಸ್ಕೇರಿ, ಮರಗೋಡು, ಕಾಂತೂರು ಮೂರ್ನಾಡು, ಹೊದ್ದೂರು, ನಾಪೋಕ್ಲು, ಕೊಣಂಜಗೇರಿ, ನರಿಯಂದಡ, ಕಕ್ಕಬ್ಬೆ, ಎಮ್ಮೆಮಾಡು, ಬಲ್ಲಮಾವಟಿ, ಅಯ್ಯಂಗೆರಿಯಲ್ಲಿ ನಡೆಯಲಿದೆ.


ಅ೨೮ ರಂದು ಬೆಟ್ಟಗೇರಿ, ಬೇಂಗೂರು, ಕುಂದಚೇರಿ, ಭಾಗಮಂಡಲ, ಕರಿಕೆ, ಪೆರಾಜೆ, ಚೆಂಬು, ಸಂಪಾಜೆ, ಮದೆ, ಕಡಗದಾಳು, ಮಕ್ಕಂದೂರು ಗ್ರಾಮ ಪಂಚಾಯಿತಿಗಳಲ್ಲಿ ಪವಿತ್ರ ಮೃತ್ತಿಕೆ ಸಂಗ್ರಹಣೆ ನಡೆಯಲಿದೆ. ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ತಮ್ಮ ಆಡಳಿತ ಮಂಡಳಿ ಹಾಗೂ ಸ್ಥಳೀಯ ಪ್ರಮುಖರೊಂದಿಗೆ ಚರ್ಚಿಸಿ ಕಾರ್ಯಕ್ರಮದ ಯಶಸ್ಸಿಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.


ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಶೇಖರ್, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಎನ್.ಮಂಜುನಾಥ್, ತಹಶೀಲ್ದಾರರಾದ ಮಹೇಶ್, ಪ್ರಕಾಶ್, ನರಗುಂದ, ತಾ.ಪಂ.ಇಒ ಜಯಣ್ಣ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net