ಕ್ಯಾ.ಬೃಜೇಶ್ ಚೌಟರನ್ನು ಹರಸಿದ ನಾರೀಶಕ್ತಿ

ooooooooooo
Published on


ಮಂಗಳೂರು : ದಕ್ಷಿಣ ಕನ್ನಡ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬೃಜೇಶ್ ಚೌಟ ಅವರು ಏ.4ರಂದು ನಾಮಪತ್ರ
ಸಲ್ಲಿಸಲಿರುವ ಹಿನ್ನೆಲೆಯಲ್ಲಿ ಮಹಿಳೆಯರ ಬೆಂಬಲದ ಸಂಕೇತವಾಗಿ ಚುನಾವಣಾ ಠೇವಣಿಯ ಮೊತ್ತಕ್ಕೆ ಕಿರು ದೇಣಿಗೆ ಸಲ್ಲಿಸಲಾಯಿತು. ಪಕ್ಷದ ಚುನಾವಣಾ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಭ್ಯರ್ಥಿ ಕ್ಯಾ. ಚೌಟರಿಗೆ ಮಹಿಳೆಯರು ಆರತಿ ಎತ್ತಿ, ತಿಲಕವಿಟ್ಟು, ದೇಣಿಗೆ ನೀಡಿ ಗೆದ್ದು ಬರುವಂತೆ ಹರಸಿದರು.
ಈ ಸಂದರ್ಭ ಕ್ಯಾ.ಚೌಟ ಮಾತನಾಡಿ ‘ಶಿವಾಜಿ ಮಹಾರಾಜರ ಪ್ರೇರಣೆಯಂತೆ ಹಿಂದುತ್ವದ ಭದ್ರಕೋಟೆಯಾಗಿರುವ ದಕ್ಷಿಣ ಕನ್ನಡ ಕ್ಷೇತ್ರವನ್ನು ಪ್ರತಿನಿಧಿಸಲು ಮಾಜಿ ಸೈನಿಕನಿಗೆ ಅವಕಾಶ ನೀಡಿದ್ದಾರೆ. ನಾರೀಶಕ್ತಿ, ಮಾತೃಶಕ್ತಿಯನ್ನು ಗೌರವಿಸುವ ಬಿಜೆಪಿಗೆ ಇಂದು ಮಾತೆಯರು ಆಶೀರ್ವಾದ ಮಾಡುವ ಮೂಲಕ ನಾರೀ ಶಕ್ತಿಯನ್ನು ಪ್ರಶ್ನಿಸಿದವರಿಗೆ ಸೂಕ್ತ ಉತ್ತರ ನೀಡಿದ್ದಾರೆ. ಅವರ ನಿರೀಕ್ಷೆಗೆ ತಕ್ಕಂತೆ
ಕಾರ್ಯ ನಿರ್ವಹಿಸುವೆ ಎಂದರು.
ಬಿಜೆಪಿ ಚುನಾವಣಾ ಪ್ರಭಾರಿ ಕ್ಯಾ. ಗಣೇಶ್ ಕಾರ್ಣಿಕ್, ವಿಧಾನ ಪರಿಷತ್ ಸದಸ್ಯ ಪ್ರತಾಪ್‌ಸಿಂಹ ನಾಯಕ್, ಜಿಲ್ಲಾ ಸಮಿತಿ ಉಪಾಧ್ಯಕ್ಷೆ ಪೂಜಾ ಪೈ, ಪಕ್ಷದ ಕೋಶಾಧಿಕಾರಿ ಸಂಜಯ್ ಪ್ರಭು, ಚುನಾವಣಾ ಸಂಚಾಲಕ ನಿತಿನ್ ಕುಮಾರ್, ಜಗದೀಶ್ ಶೇಣವ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net