ನಾದ ಸಂಗೀತೋತ್ಸವ

Published on

ಹುಬ್ಬಳ್ಳಿ: ನಾದ ಹಿಂದೂಸ್ತಾನಿ ಸಂಗೀತ ಕಲಾವಿದರ ವೇದಿಕೆಯ ಪ್ರಥಮ ವಾರ್ಷಿಕೋತ್ಸವ ಅಂಗವಾಗಿ ಆ. 3ರಂದು ಸಂಜೆ 4ಕ್ಕೆ ಇಲ್ಲಿಯ ಕಲ್ಯಾಣನಗರದ ರಾಮಕೃಷ್ಣ ವಿವೇಕಾನಂದ ಆಶ್ರಮದಲ್ಲಿ ವಿಶೇಷ ಸಂಗೀತ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಹುಬ್ಬಳ್ಳಿ ರಾಮಕೃಷ್ಣ ವಿವೇಕಾನಂದ ಆಶ್ರಮದ ಅಧ್ಯಕ್ಷ ಸ್ವಾಮಿ ತೇಜಸಾನಂದಜೀ ಮಹಾರಾಜ್ ಸಾನ್ನಿಧ್ಯ ವಹಿಸಲಿದ್ದು, ಖ್ಯಾತ ನರರೋಗ ಶಸ್ತ್ರ ಚಿಕಿತ್ಸಕ ಡಾ. ಎಸ್.ಪಿ. ಬಳಿಗಾರ, ಸಂಭಾಜಿ ಕಲಾಲ, ದಯಾನಂದ ರಾವ್ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಹಿಂದೂಸ್ತಾನಿ ಗಾಯಕರು, ಸಂಗೀತ ಶಿಕ್ಷಕ ಬಸವರಾಜ ಹಿರೇಮಠ ಹಾಗೂ ವೇದಿಕೆಯ ಕಲಾವಿದರು ಗಾಯನ ಪ್ರಸ್ತುತಪಡಿಸಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net