

ರಾಮನಗರ: ಹಂದಿ ಬೇಟೆಯಾಡಲು ಬಳಸುತ್ತಿದ್ದ ನಾಡಬಾಂಬ್ ಸ್ಪೋಟಗೊಂಡ ಪರಿಣಾಮ ಯುವಕನೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಮನಗರ ಜಿಲ್ಲೆ ಕನಕಪುರ ತಾಲ್ಲೂಕಿನ ಹಾರೋಬೆಲೆ ಗ್ರಾಮದಲ್ಲಿ ನಡೆದಿದೆ.
ಸಚಿನ್ ಕುಮಾರ್(27) ನಾಡಬಾಂಬ್ ಸಿಡಿದು ಗಂಭೀರವಾಗಿ ಗಾಯಗೊಂಡಿರುವ ಯುವಕ. ಸಾತನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಗಾಯಾಳುವನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.
ಮನೆಯಲ್ಲೇ ತಯಾರಿಸಿದ್ದ ನಾಡಬಾಂಬ್ಅನ್ನು ಹಂದಿ ಬೇಟೆಯಾಡಲು ಉಪಯೋಗಿಸಲಾಗುತ್ತಿತ್ತು ಎಂದು ಹೇಳಲಾಗಿದೆ. ಸ್ಪೋಟದ ತೀವ್ರತೆಗೆ ಯುವಕನ ಕೈ ಬೆರಳುಗಳು ಛಿದ್ರವಾಗಿದ್ದು, ಗಾಯಾಳುವನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ಧಾರೆ. ಸ್ಥಳಕ್ಕೆ ಭೇಟಿ ನೀಡಿದ ಸಾತನೂರು ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.