ಹೊಂಬುಜ ಜೈನಮಠದಲ್ಲಿ ನಾಡಹಬ್ಬ ದಸರಾ ಸಂಭ್ರಮ

15 RPT 1
ಹೊಂಬುಜ ಜೈನ ಮಠದಲ್ಲಿ ಶರನ್ನವರಾತ್ರಿ ಮಹೋತ್ಸವಕ್ಕೆ ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಸ್ವಾಮೀಜಿ ಘಟಸ್ಥಾಪನೆಯ ಮೂಲಕ ಚಾಲನೆ ನೀಡಿದರು.
Published on

ರಿಪ್ಪನ್‌ಪೇಟೆ: ಶ್ರೀಕ್ಷೇತ್ರ ಹೊಂಬುಜದ ಭಗವಾನ್ ಶ್ರೀ ಪಾರ್ಶ್ವನಾಥ ಸ್ವಾಮಿ, ಜಗನ್ಮಾತೆ ಶ್ರೀ ಪದ್ಮಾವತಿ ಅಮ್ಮನವರ ಸನ್ನಿಧಿಯಲ್ಲಿ ಪರಂಪರಾನುಗತ ಶರನ್ನವರಾತ್ರಿ ಮಹೋತ್ಸವಕ್ಕೆ ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಸ್ವಾಮೀಜಿ ಘಟಸ್ಥಾಪನೆ ಮೂಲಕ ಭಾನುವಾರ ಚಾಲನೆ ನೀಡಿದರು.

ಶ್ರೀ ಪಾರ್ಶ್ವನಾಥ ಸ್ವಾಮಿ ಮತ್ತು ಜಗನ್ಮಾತೆ ಪದ್ಮಾವತಿ ಅಮ್ಮನವರಲ್ಲಿ ಪ್ರಾರ್ಥನೆ ಸಲ್ಲಿಸಿ ಎಲ್ಲರ ಸನ್ಮಂಗಳಕ್ಕಾಗಿ ಅರಿಕೆ ಮಾಡಿಕೊಂಡಿರುವುದಾಗಿ ಶ್ರೀಗಳು ತಿಳಿಸಿದರು.
ಅ.20ರಂದು ಸರಸ್ವತಿ ಪೂಜೆ, 22ರಂದು ಜೀವದಯಾಷ್ಟಮಿ, 23ರಂದು ಆಯುಧಪೂಜೆ, 24ರಂದು ವಿಜಯದಶಮಿ ಉತ್ಸವ, ಶ್ರೀದೇವಿ ಪಲ್ಲಕ್ಕಿ ಉತ್ಸವ, ಪರಮಪೂಜ್ಯ ಸ್ವಸಿಶ್ರೀಗಳ ಸಿಂಹಾಸನಾರೋಹಣ ಹಾಗೂ ಶ್ರೀಗಳ ಪಾದಪೂಜೆ ನೆರವೇರಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net