ಕಾಂಗ್ರೆಸ್ ಸರ್ಕಾರ ರೈತ ವಿರೋಧಿ : ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಎ.ಎಸ್.ಪಾಟೀಲ್ ನಡಹಳ್ಳಿ ಆರೋಪ

nnnnnnnnnnn
Published on



ಮಂಗಳೂರು : ರಾಜ್ಯದಲ್ಲಿ ಬಿಜೆಪಿ ಸರ್ಕಾರವಿದ್ದಾಗ ಕೇಂದ್ರ ಸರ್ಕಾರ ರೈತರಿಗಾಗಿ ನೀಡುವ ರೈತ ಸಮ್ಮಾನ ನಿಧಿಗೆ ರಾಜ್ಯದ ವತಿಯಿಂದ 4 ಸಾವಿರ ರೂ.ಸೇರಿಸಿ ಪ್ರತಿ ರೈತರ ಖಾತೆಗೆ 10 ಸಾವಿರ ರೂ. ಕೊಡಲಾಗುತ್ತಿತ್ತು. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಬಂದ ಕೂಡಲೇ ರೈತರ ಖಾತೆಗೆ ನೇರ ವರ್ಗಾವಣೆಯಾಗುವ ಈ ಹಣವನ್ನು ನಿಲ್ಲಿಸಿ ಬಿಟ್ಟಿದ್ದಾರೆ ಎಂದು ರಾಜ್ಯ ಬಿಜೆಪಿ ರೈತ ಮೋರ್ಚಾದ ಅಧ್ಯಕ್ಷ ಎ.ಎಸ್.ಪಾಟೀಲ್ ನಡಹಳ್ಳಿ ಹೇಳಿದರು
ದ.ಕ. ಬಿಜೆಪಿ ಚುನಾವಣೆ ಕಾರ್ಯಾಲಯದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ‘ ವಾಸ್ತವದಲ್ಲಿ ರೈತ ವಿರೋಧಿ ನೀತಿ ಅನುಸರಿಸುತ್ತಾ ರೈತ ಪರ ಸರಕಾರ ಎಂದು ಹೇಳಿಕೊಳ್ಳುವ ಟೋಪಿ ಸರ್ಕಾರ ಎಂದು ಟೀಕಿಸಿದರು.
ಯಡಿಯೂರಪ್ಪ ಅವರು 2008ರಲ್ಲಿ ಮೊದಲ ಬಾರಿಗೆ ಮುಖ್ಯಮಂತ್ರಿ ಆದಾಗ ಹಾಲು ಉತ್ಪಾದಕ ರೈತ ಕುಟುಂಬಗಳಿಗೆ ಹಾಲಿನ
ಪ್ರೋತ್ಸಾಹ ಧನ ಎಂದು ಲೀಟರಿಗೆ 2 ರೂ. ಕೊಡುತ್ತಿದ್ದರು. ಬೊಮ್ಮಾಯಿ ಸರ್ಕಾರ ಅದಕ್ಕೆ 3 ರೂ. ಸೇರಿಸಿ ಒಟ್ಟು 5 ರೂ. ಪ್ರೋತ್ಸಾಹ ಧನ ಕೊಡಲಾಗುತ್ತಿತ್ತು. ನೇರ ವರ್ಗಾವಣೆ ಮೂಲಕ ಹೈನುಗಾರರ ಖಾತೆಗೆ ಪಾವತಿಯಾಗುತ್ತಿತ್ತು. ಆದರೆ ಯಾವಾಗ ಕಾಂಗ್ರೆಸ್ ಅಧಿಕಾರಕ್ಕೆ ಬಂತೋ ಕೂಡಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅದನ್ನೂ ನಿಲ್ಲಿಸಿಬಿಟ್ಟರು ಎಂದು ನಡಹಳ್ಳಿ ಹೇಳಿದರು.
ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ. ನವೀನ್.ಬಿ.ಸಿ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಿಶೋರ್ ಬೊಟ್ಯಾಡಿ, ರೈತ ಮೋರ್ಚಾ ಜಿಲ್ಲಾಧ್ಯಕ್ಷ ಗಣೇಶ್ ,ಕಾರ್ಯದರ್ಶಿ ಪೂರ್ಣಿಮಾ, ನಾಗರಾಜ ಮೂಡುಬಿದಿರೆ, ರಾಧಾಕೃಷ್ಣ ಬೋರ್ಕರ್ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net