ನಾಡಕಚೇರಿ ನೂತನ ಕಟ್ಟಡಕ್ಕಿಲ್ಲ ಉದ್ಘಾಟನೆ ಭಾಗ್ಯ

19 anr nadakacheri 1
ಆಯನೂರಿನಲ್ಲಿ ನೂತನವಾಗಿ ನಿರ್ಮಿಸಿರುವ ನಾಡಕಚೇರಿ ಕಟ್ಟಡ.
Published on

ಆಯನೂರು: ನಾಡಕಚೇರಿ ನೂತನ ಕಟ್ಟಡ ನಿರ್ಮಾಣಗೊಂಡು ನಾಲ್ಕು ತಿಂಗಳಾದರೂ ಇನ್ನೂ ಉದ್ಘಾಟನೆ ಭಾಗ್ಯ ಲಭಿಸಿಲ್ಲ.

ಅಂದಾಜು 18 ಲಕ್ಷ ರೂ. ವೆಚ್ಚದಲ್ಲಿ ರಾ.ಹೆ. ಬದಿಯಲ್ಲಿ ಆಯನೂರಿನ ನಾಡಕಚೇರಿಯ ನೂತನ ನಿರ್ಮಿಸಲಾಗಿದೆ. ಆದರೆ ಇನ್ನೂ ವಿದ್ಯುತ್, ನೀರಿನ ಸಂಪರ್ಕ ಕಲ್ಪಿಸಿಲ್ಲ. ವಾಹನಗಳ ಪಾರ್ಕಿಂಗ್‌ಗೆ ವ್ಯವಸ್ಥೆ ಆಗಿಲ್ಲ ಎಂದು ಅಧಿಕಾರಿಗಳು ಕಟ್ಟಡದ ಸ್ಥಳಾಂತರಕ್ಕೆ ಮುಂದಾಗಿಲ್ಲ. ಪ್ರಸ್ತುತ ಕಾರ್ಯ ನಿರ್ವಹಿಸುತ್ತಿರುವ ಎಲ್ಲ ಸಿಬ್ಬಂದಿ ಪ್ರಭಾರಿಗಳಾಗಿದ್ದು, ಶಾಶ್ವರ ಸಿಬ್ಬಂದಿ ನೇಮಕಾತಿಗೆ ಶೀಘ್ರ ಚಾಲನೆ ನೀಡಬೇಕೆಂದು ಗ್ರಾಪಂ ಸದಸ್ಯ ಗಂಗಾನಾಯ್ಕ ಆಗ್ರಹಿಸಿದ್ದಾರೆ.
ಹೊಸ ಕಟ್ಟಡದ ಸುತ್ತ ಗಿಡಗಂಟಿಗಳು ಬೆಳೆದಿದ್ದು, ಕಾನೂನು ಬಾಹಿರ ಚಟುವಟಿಕೆಗಳ ತಾಣವಾಗುತ್ತಿದೆ. ಕೂಡಲೆ ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನ ಹರಿಸಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net