ಅಭಿವೃದ್ಧಿಗೆ ಕೆಂಪೇಗೌಡರೇ ಸಂಕೇತ: ಜಿಲ್ಲಾಧಿಕಾರಿ ಡಾ.ಕುಮಾರ್ ಬಣ್ಣನೆ

2 (2)
Published on

ಮಂಡ್ಯ: ನಾಡಪ್ರಭು ಕೆಂಪೇಗೌಡ ಅವರು ಅಭಿವೃದ್ಧಿಗೆ ಸಂಕೇತವಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ.ಕುಮಾರ್ ಹೇಳಿದರು.

ನಗರದಲ್ಲಿ ನಾಡಪ್ರಭು ಕೆಂಪೇಗೌಡರ ಜಯಂತಿ ಅಂಗವಾಗಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದೊಂದಿಗೆ ಆಯೋಜಿಸಿದ್ದ ಮೆರವಣಿಗೆಗೆ ಚಾಲನೆ ನೀಡಿ ಮಾತನಾಡಿದ ಅವರು, ಕೆಂಪೇಗೌಡರ ಆದರ್ಶ ಹಾಗೂ ಕೊಡುಗೆಗಳಲ್ಲಿ ದೇಶದ ಚಿಂತನೆ, ನಾಡಿನ ಹಿತವಿದೆ. ಅವರ ಆದರ್ಶಗಳು ಇವತ್ತಿಗೂ ಪ್ರಸ್ತುತವಾಗಿವೆ. ಅವರಲ್ಲಿ ವೈಜ್ಞಾನಿಕ ನೆಲೆಯ ಚಿಂತನೆಗಳಿತ್ತು. ದೇವಾಲಯ ಜೀರ್ಣೋದ್ಧಾರ ಹಾಗೂ ಕೆರೆಗಳ ನಿರ್ಮಾಣ ಅವರ ಬಹುದೊಡ್ಡ ಕೊಡುಗೆ. ಬೆಂಗಳೂರು ನಿರ್ಮಾತೃ ಕೆಂಪೇಗೌಡರು ನಾಡಪ್ರಭು ಅಷ್ಟೇ ಅಲ್ಲ, ದೇಶದ ಪ್ರಭು ಕೂಡ ಹೌದು. ಅವರ ಕೊಡುಗೆ ಹಾಗೂ ಚಿಂತನೆಗಳನ್ನ ನಮ್ಮ ಬದುಕಿನಲ್ಲಿ ಅಳವಡಿಸಿಕೊಂಡು ಇತರರಿಗೆ ಮಾದರಿಯಾಗಬೇಕು ಎಂದರು.

ಕೆಂಪೇಗೌಡರ ಭಾವಚಿತ್ರವಿದ್ದ ಮೆರವಣಿಗೆಗೆ ಶಾಸಕ ರವಿಕುಮಾರ್ ಗಣಿಗ ಪುಷ್ಪರ್ಚನೆ ಮಾಡಿದರು. ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮಾನಂದನಾಥ ಸ್ವಾಮೀಜಿ, ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್, ಜಿ.ಪಂ ಸಿಇಒ ಶೇಖ್ ತನ್ವೀರ್ ಆಸಿಫ್, ಮಾಜಿ ಸಚಿವ ಎಂ.ಎಸ್.ಆತ್ಮಾನಂದ, ಮುಖಂಡರಾದ ಸುರೇಶ್, ಸುಜಾತಾಕೃಷ್ಣ, ವಿಜಯಲಕ್ಷ್ಮೀ ರಘುನಂದನ್, ಗಣೇಶ್, ಕೃಷ್ಣ, ಎಂ.ಎಸ್.ಚಿದಂಬರ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net