ಧಾರವಾಡ-ಹಾವೇರಿ ಕ್ಷೇತ್ರಗಳಿಗೆ ನಡ್ಡಾ, ಅಮಿತ್ ಷಾ

New SHa New77
Published on

ಹುಬ್ಬಳ್ಳಿ : ಎರಡನೇ ಹಂತದ ಮತದಾನ ನಡೆಯಲಿರುವ ರಾಜ್ಯದ ವಿವಿಧ ಲೋಕಸಭೆ ಕ್ಷೇತ್ರಗಳಿಗೆ ಬಿಜೆಪಿಯ ಸ್ಟಾರ್ ಪ್ರಚಾರಕರು ಕಾಲಿಡುತ್ತಿದ್ದಾರೆ.

ಏ. 30 ರಂದು ಮಧ್ಯಾಹ್ನ 1.30ಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಕಾಗಿನೆಲೆ ಕನಕಗುರು ಪೀಠಕ್ಕೆ ಭೇಟಿ ನೀಡುವರು. ಮಧ್ಯಾಹ್ನ 2.50ಕ್ಕೆ ಬ್ಯಾಡಗಿಯಲ್ಲಿ ರೋಡ್ ಶೋ ನಡೆಸುವರು.

ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ಮೇ 1ರಂದು ಧಾರವಾಡ ಹಾಗೂ ಹಾವೇರಿ ಲೋಕಸಭೆ ಕ್ಷೇತ್ರಗಳಲ್ಲಿ ರೋಡ್ ಶೋ ಹಾಗೂ ಪ್ರಚಾರ ಸಭೆ ನಡೆಸಲಿದ್ದಾರೆ. ಅಂದು ಮಧ್ಯಾಹ್ನ 3.15ಕ್ಕೆ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸುವ ಅಮಿತ್ ಶಾ, 3.50ಕ್ಕೆ ರಾಣೆಬೆನ್ನೂರಿನಲ್ಲಿ ರೋಡ್ ಶೋ ನಡೆಸಲಿದ್ದಾರೆ. ಸಂಜೆ 5.45ಕ್ಕೆ ಹುಬ್ಬಳ್ಳಿಯ ನೆಹರು ಮೈದಾನದಲ್ಲಿ ಸಾರ್ವಜನಿಕ ಚುನಾವಣೆ ಪ್ರಚಾರ ಸಭೆಯಲ್ಲಿ ಪಾಲ್ಗೊಳ್ಳುವರು.

ಮೇ 1ರಂದು ಹಾವೇರಿಯಲ್ಲಿ ಮಾಜಿ ಸಚಿವ ಪ್ರಮೋದ ಮಧ್ವರಾಜ್ ಚುನಾವಣೆ ಪ್ರಚಾರ ಸಭೆಯಲ್ಲಿ ಭಾಗವಹಿಸುವರು.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಏ. 30ಕ್ಕೆ ಮಧ್ಯಾಹ್ನ 1.30ಕ್ಕೆ ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಕಾಗಿನೆಲೆಯಲ್ಲಿ ಕನಕಗುರು ಪೀಠಕ್ಕೆ ಭೇಟಿ, ಮಧ್ಯಾಹ್ನ 2.50ಕ್ಕೆ ಬ್ಯಾಡಗಿಯಲ್ಲಿ ರೋಡ್ ಶೋ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net