ನಾಡು, ನುಡಿಗೆ ಸಮಯ ಮೀಸಲಿಡಿ

CTD 10 SAMMANELANA LOGO-02
Published on

ಚಿತ್ರದುರ್ಗ: ನಾಡು, ನುಡಿಗೆ ನಮ್ಮ ಸಮಯ ಮೀಸಲಿಡುವ ಅಗತ್ಯವಿದೆ ಎಂದು ಜಿಲ್ಲಾಧಿಕಾರಿ ಜಿಆರ್‌ಜೆ ದಿವ್ಯಾಪ್ರಭು ಹೇಳಿದರು. ಡಿಸಿ ಕಚೇರಿಯಲ್ಲಿ ಸೋಮವಾರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನ ಬಿಡುಗಡೆ ಮಾಡಿ ಮಾತನಾಡಿ, ಕನ್ನಡಕ್ಕೆ ತನ್ನದೇ ಆದ ಅಸ್ತಿತ್ವವಿದೆ. ನಾಯಕನಹಟ್ಟಿಯಲ್ಲಿ ಜಿಲ್ಲಾ ಸಮ್ಮೇಳನ ನಡೆಯುತ್ತಿದೆ. ಇಂಥ ಕಾರ‌್ಯಕ್ರಮಗಳಿಂದ ಜನರಲ್ಲಿ ಭಾಷಾಭಿಮಾನ ಜಾಗೃತಗೊಳ್ಳುತ್ತದೆ ಎಂದು ಅಭಿಪ್ರಾಯಪಟ್ಟರು.

ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಕೆ.ಎಂ.ಶಿವಸ್ವಾಮಿ ಮಾತನಾಡಿ, ಸಾಹಿತಿ ತಿಪ್ಪಣ್ಣ ಮರಿಕುಂಟೆ ಅವರ ಅಧ್ಯಕ್ಷತೆಯಲ್ಲಿ ಜ.21 ರಿಂದ 2 ದಿನಗಳ ಕಾಲ ಸಮ್ಮೇಳನ ನಡೆಯಲಿದೆ. ಇದಕ್ಕಾಗಿ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗುತ್ತಿದೆ. ಲಾಂಛನವನ್ನು ವಿಶಿಷ್ಟವಾಗಿ ಸಿದ್ಧಪಡಿಸಲಾಗಿದೆ ಎಂದರು.

ಕಾರ‌್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ದಿನೇಶ್ ಗೌಡಗೆರೆ, ಡಯಟ್ ಉಪನ್ಯಾಸಕ ಆರ್.ನಾಗರಾಜ್, ಕಸಾಪ ಜಿಲ್ಲಾ ಕಾರ‌್ಯದರ್ಶಿ ಕೆಪಿಎಂ ಗಣೇಶಯ್ಯ, ಕೋಶಾಧ್ಯಕ್ಷ ಸಿ.ಲೋಕೇಶ್, ಸಂಘಟನಾ ಕಾರ‌್ಯದರ್ಶಿಗಳಾದ ಶ್ರೀನಿವಾಸ ಮಳಲಿ, ವಿ.ಧನಂಜಯ್, ಪತ್ರಕರ್ತರಾದ ಟಿ.ಕೆ.ಬಸವರಾಜ್, ಲಕ್ಷ್ಮಣ್, ನರೇನಹಳ್ಳಿ ಅರುಣ್‌ಕುಮಾರ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net