

ಬೆಂಗಳೂರು: ಕರ್ನಾಟಕ ಲೇಖಕಿಯರ ಸಂಘವು ಅಬಲಾಶ್ರಮದ ಸಹಯೋಗದಲ್ಲಿ ಭಾನುವಾರ (ಆ. 11) ಬೆಳಗ್ಗೆ 10.30ಕ್ಕೆ ಟಿ.ಎಸ್.ಆರ್. ಪ್ರಶಸ್ತಿ ಪುರಸ್ಕೃತರಾದ ನಾಗಮಣಿ ಎಸ್. ರಾವ್ ದತ್ತಿನಿಧಿ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ಉಪನ್ಯಾಸ ಕಾರ್ಯಕ್ರಮ ಆಯೋಜಿಸಿದೆ.
ಬಸವನಗುಡಿಯ ಅಬಲಾಶ್ರಮದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪುರಸ್ಕೃತೆ ಎಚ್.ಎಲ್. ಸೀತಾದೇವಿ ಅವರಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷೆ ಆಯೇಷಾ ಖಾನಂ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಪತ್ರಕರ್ತೆ ಸಿ.ಜಿ. ಮಂಜುಳಾ ‘ಮಹಿಳೆ-ಪತ್ರಿಕೋದ್ಯಮ ಮತ್ತು ಸೃಜನಶೀಲ ಸಾಹಿತ್ಯ’ ವಿಷಯ ಕುರಿತು ಉಪನ್ಯಾಸ ನೀಡಲಿದ್ದಾರೆ.
ಕರ್ನಾಟಕ ಪತ್ರಕರ್ತೆಯರ ಸಂಘದ ಅಧ್ಯಕ್ಷೆ ಪದ್ಮಾ ಶಿವಮೊಗ್ಗ, ಎಸ್‌ಬಿಐನ ನಿವೃತ್ತ ಅಧಿಕಾರಿ ಎನ್. ರಂಗನಾಥ್, ಪತ್ರಕರ್ತೆ ಮಾಲತಿ ಭಟ್, ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷ ಡಾ.ಎಚ್.ಎಲ್.ಪುಷ್ಪ, ಸಂಘದ ಮಾಜಿ ಅಧ್ಯಕ್ಷೆ ನಾಗಮಣಿ ಎಸ್. ರಾವ್. ಇತರರು ಭಾಗವಹಿಸಲಿದ್ದಾರೆ ಎಂದು ಸಂಘವು ಪ್ರಕಟಣೆಯಲ್ಲಿ ತಿಳಿಸಿದೆ.