

ರಾಯಬಾಗ: ಪಟ್ಟಣದ ತಹಸೀಲ್ದಾರ್ ಕಚೇರಿ ಮುಖ್ಯದ್ವಾರ ಬಂದ್ ಮಾಡಿ, ರಾಜ್ಯ ಛಲವಾದಿ ಮಹಾಸಭಾ ತಾಲೂಕು ಒಕ್ಕೂಟದಿಂದ ನ್ಯಾಯಮೂರ್ತಿ ಎಚ್.ಎಸ್.ನಾಗಮೋಹನದಾಸ ವರದಿ ವಿರುದ್ಧ ಸೋಮವಾರ ಬೃಹತ್ ಪ್ರತಿಭಟನೆ ಕೈಗೊಂಡು ಗ್ರೇಡ್-2 ತಹಸೀಲ್ದಾರ್ ಡಿ.ಎಸ್.ಜಮಾದಾರ ಅವರಿಗೆ ಸೋಮವಾರ ಮನವಿ ಸಲ್ಲಿಸಲಾಯಿತು.
ಮುಖಂಡ ನಾಮದೇವ ಕಾಂಬಳೆ ಮಾತನಾಡಿ, ನ್ಯಾಯಮೂರ್ತಿ ಹೆಚ್.ಎನ್.ನಾಗಮೋಹನದಾಸ ಸರ್ಕಾರಕ್ಕೆ ಸಲ್ಲಿಸಿರುವ ಒಳಮೀಸಲಾತಿ ವರದಿ ಅವೈಜ್ಞಾನಿಕವಾಗಿದೆ. ವರದಿಯಲ್ಲಿ ಬಲಗೈ ಸಂಬಂಧಿತರಿಗೆ ಆಗಿರುವ ಅನ್ಯಾಯ ಸರಿಪಡಿಸಬೇಕು. ನ್ಯಾಯಮೂರ್ತಿ ನಾಗಮೋಹನದಾಸ ಅಧ್ಯಕ್ಷತೆಯ ಒಳಮೀಸಲಾತಿ ಏಕಸದಸ್ಯ ವಿಚಾರಣೆ ಆಯೋಗವು ಸರ್ಕಾರಕ್ಕೆ ಸಲ್ಲಿಸಿರುವ ವರದಿಯಲ್ಲಿ ಪರಿಶಿಷ್ಟ ಜಾತಿ ಬಲಗೈ ಸಮುದಾಯಕ್ಕೆ ಸೇರಿದ ಪರೈಯ್ಯ ಪರವನ ಜಾತಿಯನ್ನು ಎಡಗೈ ಪಂಗಡಕ್ಕೆ ಸೇರಿಸಿದೆ. ಸಮುದಾಯಕ್ಕೆ ಸೇರಿದ ಇನ್ನೂ ಹಲವು ಜಾತಿಗಳನ್ನು ಅತ್ಯಂತ ಹಿಂದುಳಿದ ಜಾತಿಗಳ ಗುಂಪಿಗೆ ಸೇರಿಸಿ ಬಲಗೈ ಸಮುದಾಯದ ಜನಸಂಖ್ಯೆಯನ್ನು ಉದ್ದೇಶ ಪೂರ್ವಕವಾಗಿ ಕಡಿಮೆ ಮಾಡಿದೆ ಎಂದರು.
ಶ್ರಾವಣ ಕಾಂಬಳೆ, ರಾಘವೇಂದ್ರ ಸಿಂಪಿ, ದಿಲೀಪ ಪಾಯನ್ನವರ, ಶಶಿಕಾಂತ ಕಾಂಬಳೆ, ರಾಜು ಕಾಂಬಳೆ, ಉತ್ತಮ ಕಾಂಬಳೆ, ಮೇಘರಾಜ ಮಾಳಗೆ, ಮಹಾದೇವ ಕಾಂಬಳೆ, ಕೃಷ್ಣಾ ಗಸ್ತಿ, ಮಂಜುನಾಥ ಮಾನೆ, ನಿಜಲಿಂಗ ಕಾಂಬಳೆ ಇತರರಿದ್ದರು.