

ಮಡಿಕೇರಿ: ಮಡಿಕೇರಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಡಾ.ಮಂಥರ್ ಗೌಡ ಪರ ಮಡಿಕೇರಿ ನಗರ ಕಾಂಗ್ರೆಸ್ ಸಮಿತಿಯಿಂದ ಬಿರುಸಿನ ಚುನಾವಣಾ ಪ್ರಚಾರ ನಡೆಯಿತು.
ನಗರದ ಅಶೋಕ್‌ಪುರ, ಗುಂಡೂರಾವ್ ಕಾಂಪೌಂಡ್ ಮತ್ತು ಆಕಾಶವಾಣಿ ಬಳಿ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಪಕ್ಷದ ಯೋಜನೆಗಳ ಕುರಿತು ಜನರಿಗೆ ಮಾಹಿತಿ ನೀಡಿ ಅಭ್ಯರ್ಥಿಯ ಗೆಲುವಿಗೆ ಮನವಿ ಮಾಡಿದರು.
ಈ ಸಂದರ್ಭ ಕೊಡಗು ಚುನಾವಣಾ ಉಸ್ತುವಾರಿ ಎಚ್.ಎಂ.ನಂದಕುಮಾರ್, ಪ್ರಚಾರ ಸಮಿತಿ ಜಿಲ್ಲಾಧ್ಯಕ್ಷ ಟಿ.ಪಿ.ರಮೇಶ್, ಮಡಿಕೇರಿ ನಗರ ಕಾಂಗ್ರೆಸ್ ಅಧ್ಯಕ್ಷ ಬಿ.ವೈ.ರಾಜೇಶ್, ಅಲ್ಪಸಂಖ್ಯಾತರ ಘಟಕದ ನಗರಾಧ್ಯಕ್ಷ ಕೆ.ಜಿ.ಪೀಟರ್, ಡಿಸಿಸಿ ಸದಸ್ಯರು, ಬ್ಲಾಕ್ ಅಧ್ಯಕ್ಷರು ಹಾಗೂ ಮತ್ತಿತರರ ಕಾರ್ಯಕರ್ತರು ಪಾಲ್ಗೊಂಡಿದ್ದರು.