

ವಿರಾಜಪೇಟೆ: ಸಮೀಪದ ಬೇಟೋಳಿ ಗ್ರಾಮದ ರಾಮನಗರದಲ್ಲಿರುವ ಶ್ರೀ ಪುದುಪಾಡಿ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಶ್ರೀ ನಾಗ ದೇವರ ಗುಡಿಯಲ್ಲಿ ಮಂಗಳವಾರ ನಾಗರ ಪಂಚಮಿ ಆಚರಿಸಲಾಯಿತು.
ದೇವಸ್ಥಾನದಲ್ಲಿ ವಿವಿಧ ಬೆಳಗ್ಗೆಯಿಂದಲೇ ಪೂಜಾ ಕಾರ್ಯಕ್ರಮಗಳು ಜರುಗಿದವು. ಅರ್ಚಕರು ಸಂಕಲ್ಪ ಪೂಜೆ ಹಾಗೂ ಪ್ರಾರ್ಥನೆ ಸಲ್ಲಿಸಿದರು. ತದನಂತರ ಅಲಂಕಾರ ಪೂಜೆ, ಕ್ಷೀರಾಭಿಷೇಕ, ಪಂಚಾಂಮೃತ ಅಭಿಷೇಕ, ಕುಂಕುಮಾರ್ಚನೆ, ಸೀಯಾಳ ಅಭಿಷೇಕ ನೆರವೇರಿಸಲಾಯಿತು. ಭಕ್ತಾದಿಗಳು ವಿಶೇಷ ಪೂಜೆ ಸಲ್ಲಿಸಿದರು. ತದನಂತರ ಅರ್ಚಕರು ಮಹಾಪೂಜೆ ಸಲ್ಲಿಸಿದರು. ದೇವಸ್ಥಾನದ ಪ್ರಧಾನ ಅರ್ಚಕರಾದ ವಿಶ್ವನಾಥ್‌ಭಟ್ ಹಾಗೂ ವಾಮನಮೂರ್ತಿ ಭಟ್ ಪೂಜಾ ಕಾರ್ಯಕ್ರಮಗಳಳ ನೇತೃತ್ವ ವಹಿಸಿದ್ದರು. ಭಕ್ತರಿಗೆ ಅನ್ನಸಂತರ್ಪಣೆ ಮಾಡಲಾಯಿತು.