ಅಧ್ಯಕ್ಷರಾಗಿ ನಾಗರಾಜ ಖಾರ್ವಿ ಆಯ್ಕೆ

ayke
Published on

ಗಂಗೊಳ್ಳಿ: ಬೈಂದೂರು ತಾಲೂಕಿನ ಮರವಂತೆ ಗ್ರಾಪಂ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಪಟಗಾರ್ ನಾಗರಾಜ ಖಾರ್ವಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಚುನಾವಣಾಧಿಕಾರಿ ಬೈಂದೂರು ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಶ ನಾಯ್ಕ ಆಯ್ಕೆ ಪ್ರಕ್ರಿಯೆ ನಡೆಸಿದರು.

ಗ್ರಾಪಂ ಅಧ್ಯಕ್ಷರಾಗಿದ್ದ ಲೋಕೇಶ್ ಖಾರ್ವಿ ವಿರುದ್ಧ 10 ಮಂದಿ ಪಂಚಾಯಿತಿ ಸದಸ್ಯರು ಅವಿಶ್ವಾಸ ಗೊತ್ತುವಳಿ ಮಂಡಿಸಿದ ಪರಿಣಾಮ ಗ್ರಾಪಂ ನೂತನ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯಿತು. ಮರವಂತೆ ಗ್ರಾಪಂ 14 ಮಂದಿ ಸದಸ್ಯರಲ್ಲಿ 9 ಮಂದಿ ಬಿಜೆಪಿ, ಇಬ್ಬರು ಕಾಂಗ್ರೆಸ್, ಇಬ್ಬರು ಪಕ್ಷೇತರ ಹಾಗೂ ಓರ್ವ ಜೆಡಿಎಸ್ ಬೆಂಬಲಿತ ಗ್ರಾಪಂ ಸದಸ್ಯರಿದ್ದಾರೆ. ಗ್ರಾಪಂ ದ್ವಿತೀಯ ಅವಧಿಗೆ ಬಿಜೆಪಿ ಬೆಂಬಲಿತ ಲೋಕೇಶ ಖಾರ್ವಿ ಅವರು ಕಾಂಗ್ರೆಸ್ ಹಾಗೂ ಇನ್ನಿತರ ಸದಸ್ಯರ ಬೆಂಬಲದೊಂದಿಗೆ ಗ್ರಾಪಂ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಅದರಿಂದ ತೀವ್ರ ಅಸಮಾಧಾನಗೊಂಡಿದ್ದ ಬಿಜೆಪಿ ಬೆಂಬಲಿತ ಗ್ರಾಪಂ ಸದಸ್ಯರು ಲೋಕೇಶ್ ಖಾರ್ವಿ ವಿರುದ್ಧ ಅವಿಶ್ವಾಸ ಮಂಡಿಸಿದ್ದರು.

ಶಾಸಕ ಗುರುರಾಜ್ ಗಂಟಿಹೊಳೆ, ಬಿಜೆಪಿ ಬೈಂದೂರು ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ಬಿಜೆಪಿ ಮುಖಂಡರು, ಕಾರ್ಯಕರ್ತರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net