ಛಬ್ಬಿ ಕಮಲ ಹಿಡಿದರು

nagaraja chabbi join bjp
Published on

ಹುಬ್ಬಳ್ಳಿ: ಕಲಘಟಗಿ ಕ್ಷೇತ್ರದ ಟಿಕೆಟ್ ವಂಚಿತ ಮಾಜಿ ಎಂಎಲ್‌ಸಿ ನಾಗರಾಜ ಛಬ್ಬಿ ಕಾಂಗ್ರೆಸ್ ಪಕ್ಷ ತೊರೆದು ದೆಹಲಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಭಾನುವಾರ ಬಿಜೆಪಿ ಸೇರಿದರು.

ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಪಕ್ಷದ ಧ್ವಜ ನೀಡುವ ಮೂಲಕ ಸ್ವಾಗತಿಸಿದರು. ಸಚಿವ ಗೋವಿಂದ ಕಾರಜೋಳ ಇತರರು ಇದ್ದರು.

ಛಬ್ಬಿ ರಾಜೀನಾಮೆ ಪತ್ರ ರವಾನೆ

ದೆಹಲಿಯಲ್ಲಿದ್ದುಕೊಂಡೇ ಛಬ್ಬಿ ಅವರು ಕೆಪಿಸಿಸಿ ಅಧ್ಯಕ್ಷರಿಗೆ ರಾಜೀನಾಮೆ ಪತ್ರ ರವಾನಿಸಿದ್ದಾರೆ.

ಕಾಂಗ್ರೆಸ್ ಪಕ್ಷದಲ್ಲಿನ ಬೆಳವಣಿಗೆಯಿಂದ ಮನನೊಂದು ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸುತ್ತಿರುವುದಾಗಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ನಾಗರಾಜ ಛಬ್ಬಿ ಕಲಘಟಗಿ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದರು.
ಕೆಲ ದಿನಗಳ ಹಿಂದೆ ಕಾಂಗ್ರೆಸ್ ಬಿಡುಗಡೆ ಮಾಡಿದ ಅಭ್ಯರ್ಥಿಗಳ 2ನೇ ಪಟ್ಟಿಯಲ್ಲಿ ಮಾಜಿ ಸಚಿವ ಸಂತೋಷ ಲಾಡ್‌ಗೆ ಟಿಕೆಟ್ ನೀಡಲಾಗಿದೆ.

ಇದರಿಂದ ಸಿಟ್ಟಿಗೆದ್ದಿದ್ದ ಛಬ್ಬಿ, ರಾಜೀನಾಮೆ ಪತ್ರ ರವಾನಿಸಿ ದೆಹಲಿಯಲ್ಲಿ ಬಿಜೆಪಿ ಸೇರಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net