ನಗರಸಭೆಗೆ ಜನರ ಸೆಡ್ಡು: ರಸ್ತೆ ಗುಂಡಿ ಮುಚ್ಚಿದ ಬಜರಂಗ ಸೇನೆ ಕಾರ್ಯಕರ್ತರು

15_11_Mdy_02(A(Road)
Published on

ಮಂಡ್ಯ: ನಗರದಲ್ಲಿ ನಿವೃತ್ತ ಸೈನಿಕ ರಸ್ತೆ ಗುಂಡಿಗೆ ಬಲಿಯಾಗಿ 3 ದಿನ ಕಳೆದರೂ ಲೋಕೋಪಯೋಗಿ ಇಲಾಖೆ ರಸ್ತೆ ಗುಂಡಿ ಮುಚ್ಚಲು ಕ್ರಮ ವಹಿಸಿಲ್ಲ ಎಂದು ಆರೋಪಿಸಿ ಮಂಗಳವಾರ ಬಜರಂಗಸೇನೆ ಕಾರ್ಯಕರ್ತರು ರಸ್ತೆ ಗುಂಡಿ ಮುಚ್ಚುವ ಮೂಲಕ ವಿನೂತನವಾಗಿ ಪ್ರತಿಭಟನೆ ನಡೆಸಿದರು.

ಬಜರಂಗ ಸೇನೆ ರಾಜ್ಯಾಧ್ಯಕ್ಷ ಬಿ.ಮಂಜುನಾಥ್ ನೇತೃತ್ವದಲ್ಲಿ ನಗರದ ಕಾರೇಮನೆ ಗೇಟ್ ಬಳಿ ರಸ್ತೆಯಲ್ಲಿ ಜಲ್ಲಿ ಮತ್ತು ಡಸ್ಟ್ ಹಾಕಿ ತಾತ್ಕಾಲಿಕವಾಗಿ ಗುಂಡಿಗಳನ್ನು ಮುಚ್ಚುವ ಮೂಲಕ ಸರ್ಕಾರ, ಜನಪ್ರತಿನಿಧಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ರಸ್ತೆಯಲ್ಲಿದ್ದ ಗುಂಡಿ ತಪ್ಪಿಸಲು ಹೋಗಿ ನಿವೃತ್ತ ಯೋಧ ಸಾತನೂರು ಗ್ರಾಮದ ಎಸ್.ಎನ್.ಕುಮಾರ್ ಅವರು ಬಿದ್ದಾಗ ಹಿಂದಿನಿಂದ ಲಾರಿ ಹರಿದು ಮೃತಪಟ್ಟಿದ್ದಾರೆ. ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ನಿರ್ಲಕ್ಷೃದಿಂದ ಈ ಅವಘಡ ಸಂಭವಿಸಿದೆ. ಈ ಹಿನ್ನೆಲೆಯಲ್ಲಿ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳ ವಿರುದ್ಧ ಸೆಂಟ್ರಲ್ ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ಕೇಸ್ ದಾಖಲಿಸುವಂತೆ ದೂರು ಸಲ್ಲಿಸಿ ಕಾನೂನು ಕ್ರಮಕ್ಕೆ ಒತ್ತಾಯಿಸಲಾಗಿದೆ ಎಂದು ಬಿ.ಮಂಜುನಾಥ್ ತಿಳಿಸಿದರು.

ಜನರು ಸರ್ಕಾರವನ್ನು ನಂಬಿ ಕೂರದೆ ತಮ್ಮ ಭಾಗದ ರಸ್ತೆ ಗುಂಡಿಗಳನ್ನು ತಾವೇ ಮುಚ್ಚಲು ಮುಂದಾಗಬೇಕು. ರಸ್ತೆ ದುರಸ್ತಿ ಮಾಡಿಸುವಂತೆ ಜನಪ್ರತಿನಿಧಿಗಳ ಮೇಲೆ ಒತ್ತಡ ಹಾಕಬೇಕು ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net