ಬಿಜೆಪಿ ತೆಕ್ಕೆಗೆ ಹೊಸಕೋಟೆ ನಗರಸಭೆ

sudakar
ಹೊಸಕೋಟೆ ನಗರಸಭೆಗೆ ಅವಿರೋಧವಾಗಿ ಆಯ್ಕೆಯಾದ ಆಶಾ ರಾಜಶೇಖರ್, ಉಪಾಧ್ಯಕ್ಷ ನವೀನ್ ಅವರನ್ನು ಸಂಸದ ಡಾ.ಕೆ.ಸುಧಾಕರ್ ಮತ್ತು ಬಿಜೆಪಿ ಕಾರ್ಯಕರ್ತರು ಅಭಿನಂದಿಸಿದರು.ತಹಸೀಲ್ದಾರ್ ಸೋಮಶೇಖರ್, ನಗರಸಭಾ ಆಯುಕ್ತ ಜಹೀರ ಅಬ್ಬಾಸ್, ಬಿಜೆಪಿ ತಾಲೂಕು ಅಧ್ಯಕ್ಷ ಸತೀಶ್‌ಗೌಡ,ಸದಸ್ಯರಾದ ಸೋಮಶೇಖರ್, ಕೆ. ದೇವರಾಜ್, ರತ್ನಮ್ಮ, ಶೋಭಾ ಶಿವಾನಂದ್, ಗುಲ್ಜಾರ್, ವೆಂಕಟಲಕ್ಷ್ಮಿ ಮತ್ತಿತರರು ಇದ್ದರು.
Published on

ಅಧ್ಯಕ್ಷರಾಗಿ ಆಶಾರಾಜಶೇಖರ್, ಉಪಾಧ್ಯಕ್ಷರಾಗಿ ನವೀನ್ ಅವಿರೋಧ ಆಯ್ಕೆ


ವಿಜಯವಾಣಿ ಸುದ್ದಿಜಾಲ ಹೊಸಕೋಟೆ
ಹೊಸಕೋಟೆ ನಗರಸಭೆಯ ನೂತನ ಅಧ್ಯಕ್ಷರಾಗಿ ಬಿಜೆಪಿ ಅಭ್ಯರ್ಥಿ ಆಶಾ ರಾಜಶೇಖರ್, ಉಪಾಧ್ಯಕ್ಷರಾಗಿ ನವೀನ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಬುಧವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಆಶಾ ರಾಜಶೇಖರ್, ಉಪಾಧ್ಯಕ್ಷ ಸ್ಥಾನಕ್ಕೆ ನವೀನ್ ಅವರನ್ನು ಹೊರತುಪಡಿಸಿ ಇನ್ಯಾರೂ ನಾಮಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ಚುನಾವಣಾ ಅಧಿಕಾರಿ ದುರ್ಗಾಶ್ರಿ ಅವಿರೋಧ ಆಯ್ಕೆ ೋಷಿಸಿದರು.
ಸ್ಪರ್ಧೆಗೆ ಕಾಂಗ್ರೆಸ್ ಹಿಂದೇಟು: ಈ ಹಿಂದೆ ಎಂಟಿಬಿ ನಾಗರಾಜ್ ಸಚಿವರಾಗಿದ್ದ ಸಂದರ್ಭದಲ್ಲಿ ನಗರಕ್ಕೆ ಅಗತ್ಯವಾದ ಅನುದಾನಗಳನ್ನು ಸಮರ್ಪಕವಾಗಿ ಒದಗಿಸಿದ ಹಿನ್ನೆಲೆಯಲ್ಲಿ ನಗರ ಸಾಕಷ್ಟು ಅಭಿವೃದ್ಧಿ ಕಂಡಿದೆ ಆದ್ದರಿಂದಲೇ ನಗರ ಸಭೆ ವ್ಯಾಪ್ತಿಯಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲು ವಿಪಕ್ಷದವರು ಸ್ಪರ್ಧೆ ಮಾಡದೆ ಹಿಂದೆ ಸರಿದಿದ್ದಾರೆ ಎಂದು ಸಂಸದ ಡಾ.ಕೆ.ಸುಧಾಕರ್ ಹೇಳಿದರು. ನೂತನವಾಗಿ ಆಯ್ಕೆಯಾದ ಅಧ್ಯಕ್ಷ, ಉಪಾಧ್ಯಕ್ಷರನ್ನು ಅಭಿನಂದಿಸಿ ಮಾತನಾಡಿದರು.ನೂತನ ಅಧ್ಯಕ್ಷ ಉಪಾಧ್ಯಕ್ಷರು ಅಭಿವೃದ್ಧಿ ಕಾರ್ಯದಲ್ಲಿ ರಾಜಕೀಯ ಹಸ್ತಕ್ಷೇಪ ಮಾಡದೆ ಪಕ್ಷಾತೀತವಾಗಿ ಎಲ್ಲ ಸದಸ್ಯರನ್ನ ವಿಶ್ವಾಸಕ್ಕೆ ತೆಗೆದುಕೊಂಡು ನಗರದ ಅಭಿವೃದ್ಧಿಗೆ ಶ್ರಮಿಸಬೇಕು ಎಂದರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ, ಹೊಸಕೋಟೆಯಲ್ಲಿ ಕಾಂಗ್ರೆಸ್ ಆಡಳಿತ ಇದ್ದರೂ ನಗರಸಭೆಯಲ್ಲಿ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿಯುವಲ್ಲಿ ಯಶಸ್ವಿಯಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net