ನಾಗಸಂದ್ರ-ಮಾದಾವರ ಪ್ರಾಯೋಗಿಕ ಸಂಚಾರ ಶೀಘ್ರ

Namma Metro
ಸಾಂದರ್ಭಿಕ ಚಿತ್ರ
Published on

ಬೆಂಗಳೂರು: ನಮ್ಮ ಮೆಟ್ರೋ ಹಸಿರು ಮಾರ್ಗದ ನಾಗಸಂದ್ರ-ಮಾದಾವರ ನಡುವೆ ಮುಂದಿನ ವಾರದಿಂದ ರೈಲುಗಳ ಪ್ರಾಯೋಗಿಕ ಸಂಚಾರ ಆರಂಭವಾಗುವ ಸಾಧ್ಯತೆಯಿದೆ ಎನ್ನಲಾಗಿದೆ.

ಸುಮಾರು 45 ದಿನಗಳ ಕಾಲ ಪ್ರಾಯೋಗಿಕ ಸಂಚಾರ ನಡೆಯಲಿದ್ದು, ಬಳಿಕ ದೆಹಲಿಯಿಂದ ಮೆಟ್ರೋ ರೈಲ್ವೆ ಸುರಕ್ಷತಾ ಆಯೋಗದ ಅಧಿಕಾರಿಗಳ ತಂಡ ನಿಲ್ದಾಣದಲ್ಲಿ ಸುರಕ್ಷತೆ, ಸಿಗ್ನಲಿಂಗ್​ ಮುಂತಾದ ವ್ಯವಸ್ಥೆಗಳ ಬಗ್ಗೆ ಪರಿಶೀಲಿಸಲಿದ್ದಾರೆ. ನಂತರ ವಾಣಿಜ್ಯ ಸಂಚಾರ ಆರಂಭಿಸಲು ಪ್ರಮಾಣಪತ್ರ ದೊರೆಯುತ್ತದೆ. ಈ ಎಲ್ಲ ಪ್ರಕ್ರಿಯೆಗಳು ಮುಗಿದು, 3.7 ಕಿ.ಮೀ. ಮಾರ್ಗದಲ್ಲಿ ಅಕ್ಟೋಬರ್​ ವೇಳೆಗೆ ವಾಣಿಜ್ಯ ಸಂಚಾರ ಪ್ರಾರಂಭವಾಗುವ ನಿರೀಕ್ಷೆಯಿದೆ.

298 ಕೋಟಿ ರೂ.ಗಳ ವೆಚ್ಚದ ವಿಸ್ತರಿತ ಮಾರ್ಗವು ಮಂಜುನಾಥನಗರ, ಚಿಕ್ಕಬಿದರಕಲ್ಲು ಮತ್ತು ಮಾದಾವರ ಸೇರಿ 3 ನಿಲ್ದಾಣ ಹೊಂದಿದೆ. 3.7 ಕಿ.ಮೀ. ವಿಸ್ತರಿತ ಕಾಮಗಾರಿ 2017ರಲ್ಲಿ ಆರಂಭಗೊಂಡಿತು. ಆದರೆ ಭೂಸ್ವಾಧಿನ ಪ್ರಕ್ರಿಯೆ ವಿಳಂಬ ಹಾಗೂ ಲಾಕ್​ಡೌನ್​ ಕಾರಣ ಕಾಮಗಾರಿಗೆ ಹಿನ್ನಡೆ ಉಂಟಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net