ಅಕ್ಟೋಬರ್​ ಅಂತ್ಯಕ್ಕೆ ವಿಸ್ತರಿತ ಮಾರ್ಗದಲ್ಲಿ ಮೆಟ್ರೋ? ಉದ್ಘಾಟನಾ ದಿನಾಂಕ ನಿಗದಿಗೆ ಬಿಎಂಆರ್​ಸಿಎಲ್​ ಪತ್ರ

Namma Metro
Published on

ಬೆಂಗಳೂರು: ನಮ್ಮ ಮೆಟ್ರೋ ವಿಸ್ತರಿತ ಹಸಿರು ಮಾರ್ಗದಲ್ಲಿ ವಾಣಿಜ್ಯ ಸೇವೆ ಆರಂಭಿಸಲು ದಿನಾಂಕ ನಿಗದಿಗಾಗಿ ನಗರಾಭಿವೃದ್ಧಿ ಇಲಾಖೆಗೆ ಬಿಎಂಆರ್​ಸಿಎಲ್​ ಪತ್ರ ಬರೆದಿದೆ.

ಮೆಟ್ರೋ ರೈಲು ಸುರಕ್ಷತಾ ಆಯುಕ್ತರು ಅ.3ರಂದು ಪರಿಶೀಲನೆ ನಡೆಸಿ, ವಾಣಿಜ್ಯ ಸಂಚಾರಕ್ಕೆ ಅನುಮತಿ ನೀಡಿದ್ದಾರೆ. ಕೇಂದ್ರ ಸರ್ಕಾರದೊಂದಿಗೆ ಚರ್ಚಿಸಿ ಉದ್ಘಾಟನಾ ದಿನಾಂಕ ನಿಗದಿಯಾಗಲಿದೆ. ಅಕ್ಟೋಬರ್​ ಅಂತ್ಯದೊಳಗೆ ವಿಸ್ತರಿತ ನಾಗಸಂದ್ರ-ಮಾದಾವರ ಮಾರ್ಗದಲ್ಲಿ ರೈಲು ಸಂಚರಿಸಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

298 ಕೋಟಿ ರೂ.ಗಳ ವೆಚ್ಚದಲ್ಲಿ 3.7 ಕಿ.ಮೀ. ವಿಸ್ತರಿತ ಮಾರ್ಗದಲ್ಲಿ ಮಂಜುನಾಥನಗರ, ಚಿಕ್ಕಬಿದರಕಲ್ಲು ಮತ್ತು ಮಾದಾವರ ಸೇರಿ ಒಟ್ಟು ಮೂರು ನಿಲ್ದಾಣ ನಿರ್ಮಾಣವಾಗಿದೆ. ಇದರಿಂದ ನಿತ್ಯ ನಾಗಮಂಗಲ ಭಾಗದಿಂದ ಬಸ್​ ಮೂಲಕ ನಗರಕ್ಕೆ ಬರುವ ಜನರಿಗೆ ಹೆಚ್ಚು ಅನುಕೂಲವಾಗಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net