ನ.24ರಂದು ವಿದ್ವಾನ್ ನಾಗೇಶ್ ಎ. ಬಪ್ಪನಾಡು ಅವರಿಗೆ ಅಭಿನಂದನಾ ಸಮಾರಂಭ

91929637_3091444097589172_576167487641485312_n
Published on


ಮಂಗಳೂರು : ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಕಳೆದ ನಾಲ್ಕು ದಶಕಗಳಿಂದ ನಾದಸ್ವರ ವಾದಕರಾಗಿ ಸೇವೆ ಸಲ್ಲಿಸುತ್ತಿರುವ ವಿದ್ವಾನ್ ನಾಗೇಶ್ ಎ. ಬಪ್ಪನಾಡು ಅವರಿಗೆ ಆಕಾಶವಾಣಿಯ ಅತ್ಯುನ್ನತ ಶ್ರೇಣಿ ಲಭಿಸಿದ ಹಿನ್ನೆಲೆಯಲ್ಲಿ ನ.24ರಂದು ಮಧ್ಯಾಹ್ನ 3ಕ್ಕೆ ವಿಶ್ವವಿದ್ಯಾಲಯ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಅಭಿನಂದನಾ ಸಮಾರಂಭ ನಡೆಯಲಿದೆ.
ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಆಶೀರ್ವಚನ ನೀಡಲಿದ್ದು, ಮಾಜಿ ಮುಖ್ಯಮಂತ್ರಿ ಡಾ. ಎಂ.ವೀರಪ್ಪ ಮೊಯ್ಲಿ ಸನ್ಮಾನ ನೆರವೇರಿಸಲಿದ್ದಾರೆ ಎಂದು ಅಭಿನಂದನಾ ಸಮಿತಿ ಕಾರ್ಯದರ್ಶಿ ಪಿ.ನಿತ್ಯಾನಂದ ರಾವ್ ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ವೇದಮೂರ್ತಿ ಅನಂತ ಪದ್ಮನಾಭ ಅಸ್ರಣ್ಣ ಮತ್ತು ವಾದಿರಾಜ ಉಪಾಧ್ಯಾಯ ಅವರಿಂದ ಅಭಿನಂದನಾ ನುಡಿ ಹಾಗೂ ಸಂಸದ ಕ್ಯಾ. ಬ್ರಿಜೇಶ್ ಚೌಟ, ಶಾಸಕರಾದ ಉಮಾನಾಥ ಕೋಟ್ಯಾನ್, ವೇದವ್ಯಾಸ ಕಾಮತ್, ಮಾಜಿ ಸಚಿವ ಅಭಯಚಂದ್ರ ಜೈನ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ, ಮಾಜಿ ಎಂಎಲ್‌ಸಿ ಕ್ಯಾ. ಗಣೇಶ್ ಕಾರ್ಣಿಕ್, ಎಸ್‌ಸಿಡಿಸಿಸಿ ಬ್ಯಾಂಕ್‌ನ ಮಾಜಿ ಕಾರ್ಯನಿರ್ವಾಹನ ನಿರ್ದೇಶಕ ಕೆ.ಅಣ್ಣಯ್ಯ ಶೇರಿಗಾರ್‌ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ . ಸಭಾ ಕಾರ್ಯಕ್ರಮಕ್ಕೂ ಮೊದಲು ದಿವ್ಯಶ್ರೀ ಮಣಿಪಾಲ ಅವರಿಂದ ಶಾಸೀಯ ಸಂಗೀತ ಕಾರ್ಯಕ್ರಮ ನಡೆಯಲಿದ್ದು, ಮಹತಿ ಕೆ. ವಯಲಿನ್ ಮತ್ತು ನಂದನ್ ಕಶ್ಯಪ್ ಮೃದಂಗದಲ್ಲಿ ಸಹಕರಿಸಲಿದ್ದಾರೆ ಎಂದು ಅವರು ತಿಳಿಸಿದರು.
ಸಮಿತಿ ಗೌರವಾಧ್ಯಕ್ಷ ಡಾ. ಹರಿಕೃಷ್ಣ ಪುನರೂರು, ಸದಸ್ಯರಾದ ವಿದುಷಿ ಗೀತಾ ಸರಳಾಯ, ಚಂದ್ರಶೇಖರ ಕೆ. ಶೆಟ್ಟಿ, ಕಾತ್ಯಾಯಿನಿ ರಾವ್, ಉಮೇಶ್ ಇಡ್ಯಾ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net