ನಾಡಿದ್ದು ಬಿಜೆಪಿ ಬೂತ್ ಕಾರ್ಯಕರ್ತರ ಸಮಾವೇಶ

sarji
ಡಾ.ಧನಂಜಯ ಸರ್ಜಿ, ಬಿಜೆಪಿ ಶಿವಮೊಗ್ಗ ಜಿಲ್ಲಾ ಕಾರ್ಯದರ್ಶಿ
Published on

ಶಿವಮೊಗ್ಗ: ನಗರದ ಸೈನ್ಸ್ ಮೈದಾನದಲ್ಲಿ ಏ.1ರ ಸಂಜೆ 4ಕ್ಕೆ ಶಿವಮೊಗ್ಗ ಗ್ರಾಮಾಂತರ ಬಿಜೆಪಿ ಘಟಕದಿಂದ ಬೂತ್ ಸಮಿತಿ ಕಾರ್ಯಕರ್ತರ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಡಾ. ಧನಂಜಯ ಸರ್ಜಿ ಹೇಳಿದರು.

ಸಮಾವೇಶದಲ್ಲಿ 12 ಸಾವಿರ ಕಾರ್ಯಕರ್ತರು ಭಾಗವಹಿಸಲಿದ್ದು, ಬಿಜೆಪಿ ಲೋಕಸಭೆ ಅಭ್ಯರ್ಥಿ ಬಿ.ವೈ.ರಾಘವೇಂದ್ರ, ಮಾಜಿ ಎಂಎಲ್‌ಸಿ ಎಂ.ಬಿ.ಭಾನುಪ್ರಕಾಶ್, ಆರ್.ಕೆ.ಸಿದ್ದರಾಮಣ್ಣ, ಮಾಜಿ ಶಾಸಕ ಕೆ.ಬಿ.ಅಶೋಕ್ ನಾಯ್ಕ, ಕೆ.ಜಿ.ಕುಮಾರಸ್ವಾಮಿ ಸಮಾವೇಶದಲ್ಲಿ ಭಾಗವಹಿಸುವರು ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಬಿಜೆಪಿ ಕಾರ್ಯಕರ್ತರನ್ನು ಆಧರಿಸಿದ ಪಕ್ಷವಾಗಿದ್ದು, ಎಲ್ಲ ಹಂತದಲ್ಲೂ ಕಾರ್ಯಕರ್ತರಿಗೆ ಹೆಚ್ಚಿನ ಮನ್ನಣೆ ನೀಡುತ್ತಿದೆ. ಬೂತ್ ಗೆದ್ದರೆ ದೇಶ ಗೆದ್ದಂತೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. ಹೀಗಾಗಿ ಬೂತ್ ಮಟ್ಟದ ಚಟುವಟಿಕೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ ಎಂದು ತಿಳಿಸಿದರು.
ಮಾಜಿ ಶಾಸಕ ಕೆ.ಬಿ.ಅಶೋಕ್‌ನಾಯ್ಕ, ಕೆ.ಜಿ.ಕುಮಾರಸ್ವಾಮಿ, ಪ್ರಮುಖರಾದ ಎಂ.ಗಣೇಶ್, ಎಂ.ಮಲ್ಲೇಶಪ್ಪ, ಕೆ.ವಿ.ಅಣ್ಣಪ್ಪ, ಚಂದ್ರಶೇಖರ್ ಸುದ್ದಿಗೋಷ್ಠಿಯಲ್ಲಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net