ನಾಲಂದ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಸ್ವಾಗತ

New Project (15)
Published on

ಪೆರ್ಲ: ನಾಲಂದ ಕಾಲೇಜಿನಲ್ಲಿ ಪ್ರಥಮ ಪದವಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ ಆಯೋಜಿಸಲಾಯಿತು. ಪ್ರಮುಖರಾದ ಡಾ.ಜಯಗೋವಿಂದ ಉಕ್ಕಿನಡ್ಕ ಶುಭಹಾರೈಸಿದರು.

ಪ್ರಾಂಶುಪಾಲ ಶಂಕರ ಖಂಡಿಗೆ ಅಧ್ಯಕ್ಷತೆ ವಹಿಸಿದ್ದರು. ಕಣ್ಣೂರು ವಿಶ್ವವಿದ್ಯಾಲಯ ಪರೀಕ್ಷೆಯಲ್ಲಿ ಬಿಎಸ್ಸಿ ಜಿಯಾಗ್ರಫಿಯಲ್ಲಿ ಪ್ರಥಮ ರ‌್ಯಾಂಕ್ ಪಡೆದ ಗಾನಸಮೃದ್ಧಿ, ಬಿಕಾಂ ಫೈನಾನ್ಸ್‌ನಲ್ಲಿ ಅತ್ಯಧಿಕ ಅಂಕ ಪಡೆದ ಅರ್ಚನಾ, ಬಿ.ಕಾಂ ಕೋ-ಆಪರೇಶನ್‌ನಲ್ಲಿ ಅತ್ಯಧಿಕ ಅಂಕ ಪಡೆದ ತೃಪ್ತಿ, ಬಿ.ಎ.ಯಲ್ಲಿ ಅತ್ಯಧಿಕ ಅಂಕ ಪಡೆದ ಜಗನ್ ಮತ್ತು ಕಣ್ಣೂರು ವಿಶ್ವವಿದ್ಯಾಲಯದ ಅರ್ಥಶಾಸ್ತ್ರ ಸ್ನಾತಕೋತ್ತರ ವಿಭಾಗದಲ್ಲಿ ಪ್ರಥಮ ರ‌್ಯಾಂಕ್ ಪಡೆದ ಸ್ವಾತಿ ಅವರನ್ನು ಗೌರವಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net