

ಕೊಪ್ಪಳ: ಸಿಎಂ ನಿರ್ದೇಶನ ಹಿನ್ನೆಲೆಯಲ್ಲಿ ಸಾರ್ವಜನಿಕರ ಅಹವಾಲುಗಳನ್ನು ಜಿಲ್ಲಾ ಮಟ್ಟದಲ್ಲಿಯೇ ಆಲಿಸಿ, ಸೂಕ್ತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ನಲಿನ್ ಅತುಲ್ ನೇತೃತ್ವದಲ್ಲಿ ಫೆ.9 ರಂದು ಯಲಬುರ್ಗಾ ತಾಲೂಕಿನ ಚಿಕ್ಕವಂಕಲಕುಂಟಾ ಗ್ರಾಮದಲ್ಲಿ ಜನತಾ ದರ್ಶನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಗ್ರಾಮದ ಮಾರುತೇಶ್ವರ ಸಮುದಾಯ ಭವನದಲ್ಲಿ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5.30ವರೆಗೆ ಕಾರ್ಯಕ್ರಮ ನಡೆಯಲಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಅಹವಾಲುಗಳನ್ನು ಸಲ್ಲಿಸಿ, ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಹಾಗೂ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಲು ಡಿಸಿ ಮನವಿ ಮಾಡಿದ್ದಾರೆ.