

ಮಂಗಳೂರು: ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಕರೊನಾ ದೃಢಪಟ್ಟಿದೆ.
ತಮ್ಮ ಟ್ವಿಟರ್ ಖಾತೆಯಲ್ಲಿ ಈ ಮಾಹಿತಿಯನ್ನು ತಿಳಿಸಿದ ನಳಿನ್, ರೋಗ ಲಕ್ಷಣ ಇಲ್ಲ, ಕೋವಿಡ್ ಪರೀಕ್ಷೆಯಲ್ಲಿ ಪಾಸಿಟಿವ್ ಬಂದಿದೆ.
ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗಿದ್ದೇನೆ, ನನ್ನೊಂದಿಗೆ ಸಂಪರ್ಕಕ್ಕೆ ಬಂದ ಎಲ್ಲರೂ ಜಾಗರೂಕರಾಗಿರಿ ಎಂದು ಕಿವಿಮಾತು ಹೇಳಿದ್ದಾರೆ.