

ಮಂಗಳೂರು: ನಾಯಕತ್ವ ಬದಲಾವಣೆ ಕುರಿತಂತೆ ವೈರಲ್ ಆಗಿರುವ ವೀಡಿಯೋಗೂ ನನಗೂ ಸಂಬಂಧವಿಲ್ಲ. ಮುಖ್ಯಮಂತ್ರಿಗಳಿಗೆ ಈ ಬಗ್ಗೆ ಪತ್ರ ಬಯುತ್ತೇನೆ ಹಾಗೂ ತನಿಖೆಗೆ ಆಗ್ರಹಿಸುತ್ತೇನೆ ಎಂದು ಸಂಸದ, ಬಿ.ಜೆ.ಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.
ಆಡಿಯೋ ವೈರಲ್ ಕುರಿತಾಗಿ ಮಂಗಳೂರಿನಲ್ಲಿ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ತನಿಖೆಯ ಬಳಿಕ ಆಡಿಯೋದ ಸತ್ಯಾಸತ್ಯತೆ ಹೊರ ಬರಲಿದೆ. ನಾಯಕತ್ವ ಬದಲಾವಣೆ ಕುರಿತು ನಮ್ಮಲ್ಲಿ ಯಾವುದೇ ಚರ್ಚೆಗಳಿಲ್ಲ. ನಮ್ಮ ಪಾರ್ಟಿಗೆ ಯಡಿಯೂರಪ್ಪ ಆತ್ಮ, ಅವರೇ ನಮ್ಮ ಸರ್ವ ಸಮ್ಮತದ ನಾಯಕ. ಈಶ್ವರಪ್ಪ, ಜಗದೀಶ್ ಶೆಟ್ಟರ್ ಪಾರ್ಟಿಯ ಎರಡು ಕಣ್ಣುಗಳು ಇದ್ದಂತೆ. ತನಿಖೆಯಾಗದೇ ಯಾರ ಬಗ್ಗೆಯೂ ಸಂಶಯ ವ್ಯಕ್ತಪಡಿಸಲ್ಲ. ತನಿಖೆ ಮೂಲಕ ಸತ್ಯ ಹೊರಬರಲಿ. ಎಲ್ಲದಕ್ಕೂ ತನಿಖೆಯ ಬಳಿಕ ಉತ್ತರ ನಿಡುತ್ತೇನೆ. ನ್ಯಾಯಾಲಯದ ಮೊರೆ ಹೋಗುವ ಬಗ್ಗೆಯೂ ಚಿಂತನೆ ನಡೆಸಿದ್ದೇನೆ ಎಂದವರು ತಿಳಿಸಿದ್ದಾರೆ.