ಕೀಲಾರ ಗ್ರಾಮದ ಸಾಹಿತಿ ಕೆ.ಪಿ.ವೀರಪ್ಪಗೆ ರಾಜರ್ಷಿ ನಾಲ್ವಡಿ ಪ್ರಶಸ್ತಿ: ತಾಯ್ನಾಡು ಕನ್ನಡ ರಕ್ಷಣಾ ವೇದಿಕೆಯಿಂದ ಪ್ರದಾನ

news mdy
Published on

ಮಂಡ್ಯ: ತಾಲೂಕಿನ ಕೀಲಾರ ಗ್ರಾಮದ ನಿವೃತ್ತ ಶಿಕ್ಷಕರೂ ಆದ ಸಾಹಿತಿ ಕೆ.ಪಿ.ವೀರಪ್ಪ ಅವರನ್ನು ಮೈಸೂರಿನ ಕಿರುರಂಗ ಮಂದಿರದಲ್ಲಿ ಬೆಂಗಳೂರಿನ ತಾಯ್ನಾಡು ಕನ್ನಡ ರಕ್ಷಣಾ ವೇದಿಕೆಯಿಂದ ಸನ್ಮಾನಿಸಲಾಯಿತು.

ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ 138ನೇ ಜನ್ಮದಿನೋತ್ಸವದ ಅಂಗವಾಗಿ ಜಾನಪದ ಕಲಾಮೇಳ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರಾಜ್ಯಮಟ್ಟದ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿ ನೀಡಲಾಯಿತು. ಈ ವೇಳೆ ಮಾತನಾಡಿದ ಕೆ.ಪಿ.ವೀರಪ್ಪ, ಶಿಕ್ಷಣ ಕ್ಷೇತ್ರದಿಂದ ನನ್ನನ್ನು ಆಯ್ಕೆ ಮಾಡಿದ್ದಕ್ಕೆ ಧನ್ಯವಾದ ತಿಳಿಸುತ್ತೇನೆ. ಶಿಕ್ಷಕ ವೃತ್ತಿಯೊಂದಿಗೆ ಸಮಾಜಸೇವೆ ವಿವಿಧ ಸಂಘ ಸಂಸ್ಥೆಗಳಲ್ಲಿ ಒಡನಾಟ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು, ನಿವೃತ್ತಿಯ ನಂತರ ಕೃಷಿಕನಾಗಿ ಕೃಷಿ ಉತ್ಪನ್ನ ಮಾರುಕಟ್ಟೆ ನಿರ್ದೇಶಕನಾಗಿ ನಿವೃತ್ತ ನೌಕರರ ಸಂಘದ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದೇನೆ ಎಂದರು.

ವೇದಿಕೆಯ ಸಂಸ್ಥಾಪಕ ರಾಜ್ಯಾಧ್ಯಕ್ಷ ಭೂಮಿಪುತ್ರ ಡಾ.ರಾಜೇಗೌಡ ಹಾಗೂ ಪದಾಧಿಕಾರಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net