

ಮಂಡ್ಯ: ಪ್ರಸ್ತುತ ತಲೆಮಾರಿನ ವಿದ್ಯಾರ್ಥಿಗಳಿಗೆ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಕೊಡುಗೆಗಳನ್ನು ತಿಳಿಸುವುದು ಅಗತ್ಯವಿದೆ ಎಂದು ರೈತರ ಹಾಗೂ ಕಾರ್ಮಿಕರ ಹಿತರಕ್ಷಣಾ ಟ್ರಸ್ಟ್ ರಾಜ್ಯಾಧ್ಯಕ್ಷ ಎಚ್.ಆರ್.ಅಶೋಕ್‌ಕುಮಾರ್ ಹೇಳಿದರು.
ನಗರದ ಸರ್ಕಾರಿ ಪ್ರೌಢಶಾಲೆ(ಮಾಜಿ ಪುರಸಭೆ)ಯಲ್ಲಿ ರೈತರ ಹಾಗೂ ಕಾರ್ಮಿಕರ ಹಿತರಕ್ಷಣಾ ಟ್ರಸ್ಟ್, ಅಮೃತ ಅಲಯನ್ಸ್ ಸಂಸ್ಥೆ, ನಿವೃತ್ತ ಶಿಕ್ಷಕ ಕೆ.ಮಾಯಿಗಶೆಟ್ಟಿ ಸೇವಾ ಸಮಿತಿ, ಸರ್ಕಾರಿ ಪದವಿ ಪೂರ್ವ ಕಾಲೇಜು ಹಾಗೂ ಪ್ರೌಢಶಾಲೆ ಸಹಯೋಗದಲ್ಲಿ ಆಯೋಜಿಸಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಕೆಆರ್‌ಎಸ್ ಅಣೆಕಟ್ಟೆ ಕಟ್ಟಿಸಿ ಕಾವೇರಿಕೊಳ್ಳದ ರೈತರಿಗೆ ಅನ್ನದಾತರಾದರು, ಹತ್ತಾರು ಜಿಲ್ಲೆಗಳಿಗೆ ವಿದ್ಯುತ್ ನೀಡಿದರು. ಸಾಕಷ್ಟು ಕಾರ್ಖಾನೆಗಳನ್ನು ನಿರ್ಮಿಸಿ ಉದ್ಯೋಗದಾತರಾದರು. ಅಕ್ಷರಜ್ಞಾನಕ್ಕಾಗಿ ಶಾಲೆ, ಕಾಲೇಜು, ವಿಶ್ವವಿದ್ಯಾನಿಲಯಗಳು ಪ್ರಾರಂಭಿಸಿದರು ಎಂದರು.
ಶಿಕ್ಷಣ ಇಲಾಖೆ ಅಧಿಕಾರಿ ಚಂದ್ರಕಾಂತಾ, ಪ್ರಾಂಶುಪಾಲ ಡಿ.ಗುರುಲಿಂಗೇಗೌಡ, ಕಾಲೇಜು ಅಭಿವೃದ್ದಿ ಸಮಿತಿ ಉಪಾಧ್ಯಕ್ಷ ಎಂ.ಎಸ್.ಅಭಿಲಾಷ್, ಕರವೇ ರಾಜ್ಯ ಉಪಾಧ್ಯಕ್ಷ ಎಂ.ಎಸ್.ಚಿದಂಬರ್, ಹಿರಿಯ ಶಿಕ್ಷಕ ಮಲ್ಲಿಕಾರ್ಜುನಯ್ಯ, ಅಮೃತ ಅಲಯನ್ಸ್ ಸಂಸ್ಥೆ ಅಧ್ಯಕ್ಷ ಎಂ.ಲೋಕೇಶ್, ಸದಸ್ಯ ಮುತ್ತುರಾಜ್ ಇತರರಿದದರು.