

ಕೆ.ಆರ್.ಸಾಗರ: ಕೃಷ್ಣರಾಜಸಾಗರ ಅಣೆಕಟ್ಟೆ ಮುಂಭಾಗ ಸುಮಾರು 8 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿದ್ದ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಹಾಗೂ ಸರ್ ಎಂ.ವಿಶ್ವೇಶ್ವರಯ್ಯ ಅವರ ಅಮೃತಶಿಲೆ ಪ್ರತಿಮೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೋಮವಾರ ಉದ್ಘಾಟಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ ಕೆ.ಆರ್.ಸಾಗರ ಅಣೆಕಟ್ಟೆ ನಿರ್ಮಾಣಕ್ಕೆ ನಾಲ್ವಡಿ ಕೃಷ್ಣರಾಜ ಒಡೆಯರ್ ಹಾಗೂ ಸರ್ ಎಂ.ವಿಶ್ವೇಶ್ವರಯ್ಯ ಕೊಡುಗೆ ಅಪಾರ. ಇಬ್ಬರು ಮಹನೀಯರ ಪ್ರತಿಮೆಗಳನ್ನು ನಿರ್ಮಾಣ ಮಾಡಿರುವುದು ಶ್ಲಾಘನೀಯ ಎಂದರು. ಜಿಲ್ಲಾ ಉಸ್ತುವಾರಿ ಸಚಿವ ಎನ್.ಚೆಲುರಾಯಸ್ವಾಮಿ, ಶಾಸಕರಾದ ರಮೇಶ ಬಂಡಿಸಿದ್ದೇಗೌಡ, ನರೇಂದ್ರ ಸ್ವಾಮಿ, ಕದಲೂರು ಉದಯ್, ಕಾ.ನೀ.ನಿಗಮ ಎಂ.ಡಿ. ಮಹೇಶ್, ಮುಖ್ಯ ಇಂಜಿನಿಯರ್ ವೆಂಕಟೇಶ್, ಅಧೀಕ್ಷಕ ಇಂಜಿನಿಯರ್ ರಘುರಾಮ್, ಕಾರ್ಯಪಾಲಕ ಇಂಜಿನಿಯರ್ ಜಯಂತ ಸೇರಿದಂತೆ ಇತರರು ಇದ್ದರು.