ಹಂಪನಾಗೆ ಕೃಷ್ಣರಾಜ ಒಡೆಯರ್ ಪ್ರಶಸ್ತಿ

Hampana
Published on

ಬೆಂಗಳೂರು: ಕನ್ನಡ ಜನಶಕ್ತಿ ಕೇಂದ್ರ ನೀಡುವ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿಗೆ ಸಾಹಿತಿ ಹಂ.ಪ. ನಾಗರಾಜಯ್ಯ ಆಯ್ಕೆಯಾಗಿದ್ದಾರೆ. ಪ್ರಶಸ್ತಿಯು 25 ಸಾವಿರ ರೂ. ನಗದು ಹಾಗೂ ಕಂಚಿನ ಫಲಕ ಒಳಗೊಂಡಿದೆ. ಸಾಮಾಜಿಕ, ಶೈಕ್ಷಣಿಕ, ಸಾಹಿತ್ಯ ಹಾಗೂ ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವವರಿಗೆ ಈ ಪ್ರಶಸ್ತಿ ನೀಡಲಾಗುತ್ತಿದೆ. ಕನ್ನಡ ಭವನದ ನಯನ ಸಭಾಂಗಣದಲ್ಲಿ ಜೂ.11ರಂದು ನಡೆಯುವ ಕಾರ್ಯಕ್ರಮದಲ್ಲಿ ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಜಾನಪದ ವಿದ್ವಾಂಸ ಗೊ.ರು. ಚನ್ನಬಸಪ್ಪ ಅಧ್ಯಕ್ಷತೆ ವಹಿಸಲಿದ್ದು, ಕವಿ ಪಿ. ಮಲ್ಲಿಕಾರ್ಜುನಪ್ಪ ಮತ್ತಿತರರು ಭಾಗವಹಿಸಲಿದ್ದಾರೆ ಎಂದು ಕೇಂದ್ರದ ಅಧ್ಯಕ್ಷ ಸಿ.ಕೆ. ರಾಮೇಗೌಡ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net