ರಾಜಕೀಯ ಉದ್ದೇಶಕ್ಕಾಗಿ ಹೆಸರು ಬದಲಾವಣೆ - ನಿಖಿಲ್

Rmgm-Ph-001- Nikil Kumarswamy Heelike Dist Name Subject-Photo- Rmgm - 27-7-2024
Published on

ರಾಮನಗರ : ರಾಜಕೀಯ ಉದ್ದೇಶಕ್ಕೆ ರಾಮನಗರ ಜಿಲ್ಲೆ ಹೆಸರು ಬದಲಾವಣೆ ಮಾಡಲಾಗುತ್ತಿದೆ ರಾಮನಗರಕ್ಕೆ ತನ್ನದೇ ಆದ ಇತಿಹಾಸವಿದೆ ಎಂದು ಜೆಡಿಎಸ್ ರಾಜ್ಯ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್‌ ಕುಮರಸ್ವಾಮಿ  ತಿಳಿಸಿದರು.

ರಾಮನಗರದ ವಿಶ್ವನಾಥ ಕಲ್ಯಾಣ ಮಂಟಪದಲ್ಲಿ ನಡೆದ ಜೆಡಿಎಸ್ ಸಭೆಯಲ್ಲಿ ಭಾಗವಹಿಸಿದ ಸಂಧರ್ಭದಲ್ಲಿ ಸುದ್ಧಿಗಾರರ ಜೊತೆ ಮಾತನಾಡಿದರು.

ರಾಮನಗರ ಅಂದಾಗ ರಾಮನ ಪಾದಸ್ಪರ್ಶದ ಪುಣ್ಯಕ್ಷೇತ್ರ. ರಾಮನಗರ ಜಿಲ್ಲೆ ಸ್ಥಾಪನೆ ಆದಾಗಾ ಯಾರೂ ಇದಕ್ಕೆ ಚಕಾರ ಎತ್ತಲಿಲ್ಲ ರಾಮನಗರ ಹೆಸರಿಗೆ ಯಾರೂ ವಿರೋಧ ಮಾಡಲಿಲ್ಲ. ಆದರೆ ಇಂದು ಬ್ರಾಂಡ್ ಬೆಂಗಳೂರು ಹೆಸರಲ್ಲಿ ರಾಮನಗರ ಇತಿಹಾಸ ಅಳಿಸುವ ಕೆಲಸ ಆಗುತ್ತಿದೆ. ಜಿಲ್ಲೆಯ ಜನತೆ ಇದರ ವಿರುದ್ಧವಾಗಿದ್ದಾರೆ. ಹೆಸರು ಬದಲಾವಣೆ ಆದ್ರೆ ಜನರಿಗೆ ಸಾಕಷ್ಟು ಸಮಸ್ಯೆ ಆಗಲಿದೆ. ಆಧಾರ್ ಕಾರ್ಡ್, ರೇಷನ್ ಕಾರ್ಡ್, ರೆವೆನ್ಸೂ ದಾಖಲಾತಿ ಬದಲಾವಣೆ ಮಾಡಬೇಕು.  ಸಾಕಷ್ಟು ಟೆಕ್ನಿಕಲ್ ಸಮಸ್ಯೆಗಳು ಎದುರಾಗುತ್ತವೆ. ಜನತೆ ನಿತ್ಯ ತಾಲೂಕು ಕಚೇರಿಗಳಿಗೆ ಅಲೆದಾಡುವ ಪರಿಸ್ಥಿತಿ ಎದುರಾಗುತ್ತೆ.

ಜಿಲ್ಲಾ ಹೆಸರು ಈ ಬಗ್ಗೆ ದೊಡ್ಡಮಟ್ಟದ ಹೋರಾಟಕ್ಕೆ ಚರ್ಚೆ ಮಾಡ್ತಿದ್ದೇವೆ.  ನಾಳೆ ಕೇಂದ್ರ ಸಚಿವ ಕುಮಾರಸ್ವಾಮಿ ಹಾಗೂ ಬಿಜೆಪಿ ನಾಯಕರ ಜೊತೆ ಚರ್ಚೆ ಮಾಡ್ತೇವೆ. ಮುಂದಿನ ಹೋರಾಟದ ಬಗ್ಗೆ ನಿರ್ಧಾರ ಮಾಡುತ್ತೇವೆ ಎಂದು ತಿಳಿಸಿದರು.

ತಿರುಗೇಟು

ಹೆಸರು ಬದಲಾವಣೆಗೆ ಹಾಸನದವರ ವಿರೋಧ ಎಂಬ ರಾಮನಗರ ಶಾಸಕ ಇಕ್ಬಾಲ್ ಹೇಳಿಕೆ ವಿಚಾರವಾಗಿ ಪ್ರಶ್ನಿಸಿದಾಗ ಜನರ ಅಭಿಪ್ರಾಯ ತಿಳಿಯದೇ ಏಕಾಏಕಿ ಆದೇಶ ಮಾಡೋದು ಸರಿಯಲ್ಲ. ಬಗ್ಗೆ ರಾಮನಗರದ ಟೋಕನ್ ಶಾಸಕರು ಇಲ್ಲಸಲ್ಲದ ಹೇಳಿಕೆ ನೀಡ್ತಿದ್ದಾರೆ.ಗಾಳಿಯಲ್ಲಿ ಗುಂಡುಹೊಡೆಯೋದು ಬಿಟ್ಟು ಮೊದಲು ಜನರ ಕೆಲಸ ಮಾಡಲಿ ಎಂದು ಶಾಸಕ ಇಕ್ಬಾಲ್ ಹುಸೇನ್‌ಗೆ ನಿಖಿಲ್ ಕುಮಾರಸ್ವಾಮಿ ತಿರುಗೇಟು ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net