ಹೆಸರು ಕಾಳು ಖರೀದಿ ಕೇಂದ್ರ ಸದ್ಬಳಕೆಯಾಗಲಿ

web4
ಸವದತ್ತಿ ಪಟ್ಟಣದಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ತೆರೆಯಲಾದ ಹೆಸರುಕಾಳು ಖರೀದಿ ಕೇಂದ್ರವನ್ನು ಶಾಸಕ ವಿಶ್ವಾಸ ವೈದ್ಯ ಉದ್ಘಾಟಿಸಿದರು. ರವೀಂದ್ರ ಯಲಿಗಾರ, ಶಿವಪ್ರಕಾಶ ಪಾಟೀಲ, ಎಪಿಎಂಸಿ ಅಧ್ಯಕ್ಷ ಚಂದ್ರು ಜಂಬ್ರಿ, ಮಾರುತಿ ಬಸಲಿಗುಂದಿ ಇತರರಿದ್ದರು.
Published on

ಸವದತ್ತಿ: ಪಟ್ಟಣದಲ್ಲಿ ಹೆಸರು ಕಾಳು ಖರೀದಿ ಕೇಂದ್ರ ಪ್ರಾರಂಭಿಸಲಾಗಿದ್ದು, ಸರ್ಕಾರದ ಬೆಂಬಲ ಬೆಲೆ ಕ್ವಿಂಟಾಲ್‌ಗೆ 8,682 ರೂ. ಇದ್ದು, ರೈತರು ಕೇಂದ್ರದ ಲಾಭ ಪಡೆಯಬೇಕು ಎಂದು ಶಾಸಕ ವಿಶ್ವಾಸ ವೈದ್ಯ ಹೇಳಿದರು.

ಇಲ್ಲಿನ ತಾಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರಿ ಸಂಘದ ಸಭಾಂಗಣದಲ್ಲಿ ಸೋಮವಾರ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ತೆರೆಯಲಾದ ಹೆಸರು ಕಾಳು ಖರೀದಿ ಕೇಂದ್ರ ಉದ್ಘಾಟಿಸಿ ಮಾತನಾಡಿದರು.

ಕ್ವಿಂಟಾಲ್‌ಗೆ 8,682 ರೂಪಾಯಿಯಂತೆ ಪ್ರತಿ ಎಕರೆಗೆ ಗರಿಷ್ಠ 2 ಕ್ವಿಂಟಾಲ್‌ನಂತೆ ಪ್ರತಿ ರೈತರಿಂದ ಗರಿಷ್ಠ 10 ಕ್ವಿಂಟಾಲ್ ಹೆಸರು ಖರೀದಿಸಲಾಗುತ್ತದೆ. ಆಧಾರ್ ಜೋಡಣೆಯಾದ ಬ್ಯಾಂಕ್ ಖಾತೆಗೆ ಮಾತ್ರ ಉತ್ಪನ್ನದ ಮೌಲ್ಯವನ್ನು ಡಿಬಿಟಿ ಮೂಲಕ ಜಮೆ ಮಾಡಲಾಗುತ್ತದೆ. ಟಿಎಪಿಸಿಎಂಎಸ್ ಮೂಲಕ ಎಪಿಎಂಸಿಯಲ್ಲಿ ಖರೀದಿ ಮಾಡಲಾಗುವುದು. ಆ.24 ರಿಂದಲೇ ನೋಂದಣಿ ಪ್ರಕ್ರಿಯೆ ಪ್ರಾರಂಭವಾಗಿದ್ದು ಅ.5ರ ವರೆಗೆ ನೋಂದಣಿಗೆ ಅವಕಾಶವಿದೆ. ನ.20ರ ವರೆಗೂ ಖರೀದಿ ಮಾಡಲಾಗುವುದು ಎಂದರು.

ಟಿಎಪಿಸಿಎಂಎಸ್ ಅಧ್ಯಕ್ಷ ರವೀಂದ್ರ ಯಲಿಗಾರ ಮಾತನಾಡಿದರು. ಕೃಷಿ ಸಹಾಯಕ ನಿರ್ದೇಶಕ ಶಿವಪ್ರಕಾಶ ಪಾಟೀಲ, ಎಪಿಎಂಸಿ ಅಧ್ಯಕ್ಷ ಚಂದ್ರು ಜಂಬ್ರಿ, ಉಪಾಧ್ಯಕ್ಷ ಮಾರುತಿ ಬಸಲಿಗುಂದಿ, ಪುರಸಭೆ ಅಧ್ಯಕ್ಷೆ ಚನ್ನವ್ವ ಹುಚ್ಚಣ್ಣವರ, ಮಾರುಕಟ್ಟೆ ಮೇಲ್ವಿಚಾರಕ ಚತ್ರೇಶ ದಾಸರ, ನೀಲಪ್ಪ ಅಣ್ಣಿಗೇರಿ, ಮಲ್ಲಿಕಾರ್ಜುನ ಪುರದಗುಡಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net