

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಏ.15, ಮೇ.4, 12 ಹಾಗೂ 18 ರಂದು ನಡೆಯಲಿರುವ ಐಪಿಎಲ್ ಪಂದ್ಯಾಟ ವೀಸಲು ತೆರಳುವ ಜನರಿಗೆ ಅನುಕೂಲವಾಗುವಂತೆ ನಮ್ಮ ಮೆಟ್ರೋ ಅವಧಿ ರಾತ್ರಿ 11.30ರ ವರೆಗೆ ವಿಸ್ತರಿಸಿರುವುದಾಗಿ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತಿ ತಿಳಿಸಿದೆ.
ಮೆಟ್ರೋ ನಿಲ್ದಾಣಗಳಲ್ಲಿ ರಿರ್ಟನ್ ಪೇಪರ್ ಟಿಕೆಟ್ ವಿತರಣೆ ಕೂಡ ಲಭ್ಯವಿದ್ದು, ಪಂದ್ಯದ ವೇಳೆ ಮ.2 ಗಂಟೆಯಿಂದ ಎಲ್ಲಾ ನಿಲ್ದಾಣಗಳಲ್ಲಿ 50 ರೂ. ಪೇಪರ್ ಟಿಕೆಟ್ ಸಿಗಲಿದೆ. ಕಬ್ಬನ್ ಪಾರ್ಕ್ ಮತ್ತು ಮಹಾತ್ಮ ಗಾಂಧಿ ರಸ್ತೆ ನಿಲ್ದಾಣದಲ್ಲಿ ಪೇಪರ್ ಟಿಕೆಟ್ಗೆ ವ್ಯವಸ್ಥೆ ಮಾಡಲಾಗಿದೆ. ಪೇಪರ್ ಟಿಕೆಟ್ ಪಡೆದು ಎಲ್ಲಾ ಮೆಟ್ರೋ ನಿಲ್ದಾಣಕ್ಕೆ ಪ್ರಯಾಣ ಬೆಳೆಸಲು ಅವಕಾಶವಿದೆ. ಆದರೆ, ಈ ಟಿಕೆಟ್ಗಳು ರಾತ್ರಿ 8 ರಿಂದ ದಿನದ ಸೇವೆ ಕೊನೆಗೊಳ್ಳುವರೆಗೆ ಮಾತ್ರ ಮಾನ್ಯವಾಗಿರಲಿದೆ ಎಂದು ಬಿಎಂಆರ್ಸಿಎಲ್ ತಿಳಿಸಿದೆ.
ವಾಟ್ಸ್ಆ್ಯಪ್, ನಮ್ಮ ಮೆಟ್ರೋ ಆ್ಯಪ್, ಪೇಟಿಎಂ ಮೂಲಕ ಪಂದ್ಯದ ಆರಂಭಕ್ಕೆ ಮುಂಚಿತವಾಗಿ ಕ್ಯೂಆರ್ ಟಿಕೆಟ್ಗಳನ್ನು ಖರೀದಿಸಲು ಅವಕಾಶ ಕಲ್ಪಿಸಲಾಗಿದೆ. ಟಿಕೆಟ್ ಕೌಂಟರ್ಗಳಲ್ಲಿ ಉಂಟಾಗುವ ಜನಸಂದಣಿಯಿಂದ ತಪ್ಪಿಸಿಕೊಳ್ಳಲು ಈ ಸೌಲಭ್ಯವನ್ನು ಬಳಸಿಕೊಳ್ಳುವಂತೆ ಬಿಎಂಆರ್ಸಿಎಲ್ ಸೂಚಿಸಿದೆ.