ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ಕಾಮನ್​ ಮೊಬಿಲಿಟಿ ಕಾರ್ಡ್​ ಲಭ್ಯ

Mobility Card
Published on

ಬೆಂಗಳೂರು: 'ಒನ್​ ನೇಷನ್​ ಒನ್​ ಕಾರ್ಡ್​'ಗೆ ಪೂರಕವಾಗಿ ರುಪೇ ನ್ಯಾಷನಲ್​ ಕಾಮನ್​ ಮೊಬಿಲಿಟಿ ಕಾರ್ಡ್​ ಸೋಮವಾರದಿಂದ (ಆ.21) ನಗರದ ಎಲ್ಲ ಮೆಟ್ರೋ ನಿಲ್ದಾಣಗಳಲ್ಲಿ ಖರೀದಿಗೆ ಲಭ್ಯವಿದೆ ಎಂದು ಬಿಎಂಆರ್​ಸಿಎಲ್​ ತಿಳಿಸಿದೆ.

ದೇಶದ ಎಲ್ಲ ಸಾರಿಗೆ ವ್ಯವಸ್ಥೆ, ಚಿಲ್ಲರೆ ಅಂಗಡಿ, ಪೆಟ್ರೋಲ್​ ಬಂಕ್​, ಶಾಪಿಂಗ್​ ಮುಂತಾದ ಸಂದರ್ಭಗಳಲ್ಲಿ ಬಳಸಬಹುದಾಗಿದೆ. ಪ್ರಯಾಣಿಕರು ತಮ್ಮ ವಿವರಗಳನ್ನು NAMMAMETRO.AGSINDIA.COM ವೆಬ್​ಸೈಟ್​ ಅಥವಾ BMRCL RBL Bank NCMC ಮೊಬೈಲ್​ ಅಪ್ಲಿಕೇಶನ್​ನಲ್ಲಿ ಸ್ವಯಂ-ನೋಂದಣಿ ಮಾಡಿಕೊಂಡು, ನೋಂದಣಿ ಸಂಖ್ಯೆ ಅಥವಾ ನೋಂದಾಯಿತ ಮೊಬೈಲ್​ ಸಂಖ್ಯೆಯನ್ನು ಟಿಕೆಟ್​ ಕೌಂಟರ್​ನಲ್ಲಿರುವ ನಿರ್ವಾಹಕರಿಗೆ ತಿಳಿಸಬೇಕು. ಕಾರ್ಡ್​ನ ಬೆಲೆ 50 ರೂ. ಆಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net