ನಮ್ಮೋರು ನಮ್ಮ ಕೆರೆ ಹಸ್ತಾಂತರ ಕಾರ್ಯಕ್ರಮ ಇಂದು

Published on

ಬೆಳ್ವೆ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ನೇತೃತ್ವದಲ್ಲಿ ಬೆಳ್ವೆ ಗ್ರಾಮ ಪಂಚಾಯಿತಿ ಭಾರಮಕ್ಕಿ ಕೆರೆ ಅಭಿವೃದ್ಧಿ ಸಮಿತಿ ಹಾಗೂ ಸ್ಥಳೀಯರ ಸಂಯುಕ್ತ ಆಶ್ರಯದಲ್ಲಿ ಪುನಶ್ಚೇತನಗೊಳಿಸಲಾದ 810ನೇ ಕೆರೆ ಹಸ್ತಾಂತರ, ಬಾಗಿನ ಸಮರ್ಪಣೆ ಕಾರ್ಯಕ್ರಮ ಅಲ್ಬಾಡಿ ಭಾರಮಕ್ಕಿ ಕೆರೆ ವಠಾರದಲ್ಲಿ ಜೂ.8ರಂದು ಬೆಳಗ್ಗೆ 10 ಗಂಟೆಗೆ ನಡೆಯಲಿದೆ. ಬೆಳ್ವೆ ಸಂದೇಶ್ ಕಿಣಿ ಮೆಮೋರಿಯಲ್ ಚಾರಿಟೆಬಲ್ ಟ್ರಸ್ಟ್ ಸಭಾಂಗಣದಲ್ಲಿ ಬೆಳಗ್ಗೆ 10.15ಕ್ಕೆ ಸಭಾ ಕಾರ್ಯಕ್ರಮ ನಡೆಯಲಿದೆ.

ಶಾಸಕ ಎ.ಕಿರಣ್‌ಕುಮಾರ್ ಕೊಡ್ಗಿ ಉದ್ಘಾಟಿಸಲಿದ್ದಾರೆ. ಅಲ್ಬಾಡಿ ಭಾರಮಕ್ಕಿ ಕೆರೆ ಅಭಿವೃದ್ಧಿ ಸಮಿತಿ ಅಧ್ಯಕ್ಷ ದಿನಕರ ಶೆಟ್ಟಿ ಗುಡ್ಡಿಮನೆ, ಆರ್ಡಿ ಬೆಳ್ವೆ ಗೋಳಿಯಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷ ಎಸ್.ಜಯರಾಮ ಶೆಟ್ಟಿ ಸುರ‌್ಗೋಳಿ, ಬೆಳ್ವೆ ವಲಯದ ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷ ಎಚ್.ವಸಂತಕುಮಾರ್ ಶೆಟ್ಟಿ, ಬೆಳ್ವೆ ವ್ಯವಸಾಯ ಸೇವಾ ಸಹಕಾರಿ ಸಂಘದ ಉಪಾಧ್ಯಕ್ಷ ಬಿ.ಹರೀಶ್ ಕಿಣಿ, ಗ್ರಾಪಂ ಅಧ್ಯಕ್ಷೆ ರಾಧಾ, ಮಾಜಿ ಅಧ್ಯಕ್ಷ ಎಸ್.ಚಂದ್ರಶೇಖರ ಶೆಟ್ಟಿ, ಸದಸ್ಯ ಕರುಣಾಕರ ಶೆಟ್ಟಿ ಅಲ್ಬಾಡಿ, ಪಿಡಿಒ ಪ್ರಭಾಶಂಕರ್ ಪುರಾಣಿಕ್, ಸಂದೇಶ್ ಕಿಣಿ ಮೆಮೋರಿಯಲ್ ಚಾರಿಟೆಬಲ್ ಟ್ರಸ್ಟ್ ಅಧ್ಯಕ್ಷ ಬಿ.ಸತೀಶ್ ಕಿಣಿ, ಉದ್ಯಮಿಗಳಾದ ಬಿ.ರಾಜೇಂದ್ರ ಕಿಣಿ, ಬಿ.ಗಣೇಶ್ ಕಿಣಿ ಬೆಳ್ವೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆ ಸಹಾಯಕ ಕಾರ್ಯಪಾಲಕ ಅಭಿಯಂತರ ಮಹಾಬಲ ನಾಯ್ಕ ಅಲ್ಬಾಡಿ, ಉಡುಪಿ ಜಿಲ್ಲಾ ವಿಹಿಂಪ ಉಪಾಧ್ಯಕ್ಷ ವೈ.ವಿಜಯಕುಮಾರ್ ಶೆಟ್ಟಿ, ಸುರೇಶ್ ಶೆಟ್ಟಿ ಆರ್ಡಿ, ಮಡಾಮಕ್ಕಿ ಗ್ರಾಪಂ ಅಧ್ಯಕ್ಷ ಉದಯಕುಮಾರ್ ಶೆಟ್ಟಿ ಶೇಡಿಮನೆ, ಭೋಜು ಪೂಜಾರಿ ಅಲ್ಬಾಡಿ, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹೆಬ್ರಿ ತಾಲೂಕು ಕಾರ್ಯ ನಿರ್ವಾಹಣಾಧಿಕಾರಿ ವಿಜಯ, ಬಿಸಿ ಟ್ರಸ್ಟ್ ಉಡುಪಿ ಪ್ರಾದೇಶಿಕ ಕಚೇರಿ ಪ್ರಾದೇಶಿಕ ನಿರ್ದೇಶಕ ಆನಂದ ಸುವರ್ಣ, ಉಡುಪಿ ಜಿಲ್ಲಾ ನಿರ್ದೇಶಕ ನಾಗರಾಜ ಶೆಟ್ಟಿ, ಹೆಬ್ರಿ ತಾಲೂಕು ಯೋಜನಾಧಿಕಾರಿ ಲೀಲಾವತಿ, ಬೆಳ್ವೆ ವಲಯ ಒಕ್ಕೂಟದ ಅಧ್ಯಕ್ಷ ಕೃಷ್ಣ ಪುತ್ರನ್, ಕೃಷಿ ಅಧಿಕಾರಿ ಉಮೇಶ್ ಬಿ.ಕೆ.ಹಾಗೂ ಇನ್ನಿತರರು ಭಾಗವಹಿಸಲಿದ್ದಾರೆ ಎಂದು ಬೆಳ್ವೆ ವಲಯ ಮೇಲ್ವಿಚಾರಕ ರಾಘವೇಂದ್ರ ಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net