

ವಿಜಯವಾಣಿ ಸುದ್ದಿಜಾಲ ನಂದಗುಡಿ
ಬದಲಾದ ಆಹಾರ ಪದ್ಧತಿ ಹಾಗೂ ಪರಿಸರ ಮಾಲಿನ್ಯದಿಂದ ಅನೇಕ ರೀತಿಯ ಕಾಯಿಲೆಗಳು ಜನಸಾಮಾನ್ಯರನ್ನು ಕಾಡುತ್ತಿವೆ. ಇಂದಿನ ವೈದ್ಯಕೀಯ ವೆಚ್ಚವನ್ನು ಭರಿಸಲಾಗದ ಜನರು ಮಾರಕ ರೋಗಗಳಿಗೆ ತುತ್ತಾಗುತ್ತಿದ್ದಾರೆ ಎಂದು ಎಪಿಎಂಸಿ ಮಾಜಿ ಅಧ್ಯಕ್ಷ ಎಚ್.ಎನ್. ಧರ್ಮೇಶ್ ಕಳವಳ ವ್ಯಕ್ತಪಡಿಸಿದರು.
ನಂದಗುಡಿ ಹೋಬಳಿಯ ಕೊಂಡ್ರಹಳ್ಳಿಯಲ್ಲಿ ಆಕಾಶ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸಹಭಾಗಿತ್ವದಲ್ಲಿ ಹಮ್ಮಿಕೊಂಡಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಮಾತನಾಡಿದರು.
ಸಾರ್ವಜನಿಕರಿಗೆ ಗುಣಮಟ್ಟದ ಆರೋಗ್ಯ ಸೇವೆ ನೀಡುವ ನಿಟ್ಟಿನಲ್ಲಿ ಉಚಿತ ಆರೋಗ್ಯ ಶಿಬಿರ ಅವಶ್ಯ. ರಕ್ತದೊತ್ತಡ, ಸಕ್ಕರೆ ಕಾಯಿಲೆ ಇರುವವರು ನಿಯಮಿತವಾಗಿ ತಪಾಸಣೆ ಮಾಡಿಸಿಕೊಳ್ಳುವ ಮೂಲಕ ಕಾಯಿಲೆ ನಿಯಂತ್ರಣದಲ್ಲಿಟ್ಟಿಕೊಳ್ಳಬಹುದು, ಬಡವರ ಪಾಲಿಗೆ ಶಿಬಿರ ಸಹಕಾರಿಯಾಗಿದೆ ಎಂದರು.
ಗ್ರಾ.ಪಂ. ಸದಸ್ಯ ಎನ್.ಎನ್. ಮಂಜುನಾಥ್ ಮಾತನಾಡಿ, ಆರೋಗ್ಯ ಸಮಸ್ಯೆ ಬಗ್ಗೆ ನಿರ್ಲಕ್ಷ್ಯತನ ವಹಿಸುತ್ತಿರುವುದರಿಂದ ಮುಂದಿನ ದಿನಗಳಲ್ಲಿ ಭಾರಿ ದಂಡ ತೆರಬೇಕಾಗುತ್ತದೆ. ತಮ್ಮ ಗ್ರಾಮಕ್ಕೆ ವೈದ್ಯರು ಬಂದು ಉತ್ತಮ ಚಿಕಿತ್ಸೆ ನೀಡುತ್ತಿದ್ದು, ಶಿಬಿರವನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಮನವಿ ಮಾಡಿದರು.
ಆಕಾಶ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ವ್ಯವಸ್ಥಾಪಕ ಮುನಿರಾಜ ನೇತೃತ್ವದಲ್ಲಿ 250ಕ್ಕೂ ಹೆಚ್ಚು ಮಂದಿಗೆ ತಪಾಸಣೆ ಮಾಡಿ, ಔಷಧ ವಿತರಿಸಲಾಯಿತು.
ಗ್ರಾಪಂನ ಅಧ್ಯಕ್ಷೆ ಮುನಿವೆಂಕಟಮ್ಮ ಬಚ್ಚಪ್ಪ, ಎಸ್‌ಎಫ್‌ಎಸ್‌ಸಿಎಸ್‌ನ ನಿರ್ದೇಶಕ ರವಿಶಂಕರ್, ಆಕಾಶ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಡಾ.ಕಿರಣ್, ಡಾ.ರವಿ, ಯುವ ಮುಖಂಡರಾದ ಸಂತೋಷಕುಮಾರ್, ಹರೀಶ್ ಇದ್ದರು.