ನಂದಿಹಳ್ಳಿ ರಂಗನಾಥ ರಥೋತ್ಸವ

dj hyr nandhihalli
Published on

ಹಿರಿಯೂರು: ತಾಲೂಕಿನ ನಂದಿಹಳ್ಳಿ ಗ್ರಾಮದಲ್ಲಿ ಇತಿಹಾಸ ಪ್ರಸಿದ್ಧ ಶ್ರೀ ರಂಗನಾಥ ಸ್ವಾಮಿ ಬ್ರಹ್ಮ ರಥೋತ್ಸವ ವಿಜೃಂಭಣೆಯಿಂದ ನಡೆಯಿತು.

ಸೋಮವಾರ ಮುಂಜಾನೆ 5.30ರ ವೇಳೆಗೆ ರಥಕ್ಕೆ ದೇಗುಲದ ಪ್ರಧಾನ ಅರ್ಚಕ ಮತ್ತು ಪಟ್ಟದ ಪೂಜಾರಿ ವಿಶೇಷ ಪೂಜೆ ಸಲ್ಲಿಸಿ ರಥೋತ್ಸವಕ್ಕೆ ಚಾಲನೆ ನೀಡಿದರು.

ಜಾತ್ರೋತ್ಸವದ ಅಂಗವಾಗಿ ಹೋಮ-ಹವನ, ಗಂಗಾಪೂಜೆ, ಮಹಾಕುಂಭಾಭಿಷೇಕ, ಪಂಚಾಮೃತ ಅಭಿಷೇಕ, ಮಹಾಮಂಗಳಾರತಿ ನಡೆಯಿತು.

ಸ್ವಾಮಿಯ ಉತ್ಸವ ಮೂರ್ತಿಯನ್ನು ಗ್ರಾಮದ ರಾಜ ಬೀದಿಯಲ್ಲಿ ಮೆರವಣಿಗೆ ನಡೆಸಲಾಯಿತು. ಜಿಲ್ಲೆಯ ವಿವಿಧೆಡೆಯಿಂದ ಸಹಸ್ರಾರು ಭಕ್ತರು ಪಾಲ್ಗೊಂಡಿದ್ದರು. ಜಾತ್ರೋತ್ಸವದ ಅಂಗವಾಗಿ ವಿವಿಧ ಸಾಂಸ್ಕೃತಿ ಮತ್ತು ಧಾರ್ಮಿಕ ಕಾರ್ಯಕ್ರಮ ಆಯೋಜಿಸಲಾಗಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net