ನಂದಿನಿ ಉತ್ಪನ್ನಗಳ ಖರೀದಿಸಿ ಹೈನುಗಾರಿಕೆಗೆ ಪ್ರೋತ್ಸಾಹಿಸಿ

241220 Kushtagi Nandini Products Sweet Festival
ಕುಷ್ಟಗಿಯಲ್ಲಿ ಕರ್ನಾಟಕ ಹಾಲು ಮಹಾ ಮಂಡಳಿ ವತಿಯಿಂದ ಗುರುವಾರ ಆಯೋಜಿಸಿದ್ದ ನಂದಿನಿ ಸಿಹಿ ಉತ್ಸವಕ್ಕೆ ರಾಬಕೊ ಹಾಲು ಒಕ್ಕೂಟದ ಉಪಾಧ್ಯಕ್ಷ ಶಿವಪ್ಪ ವಾದಿ ಚಾಲನೆ ನೀಡಿದರು.
Published on

ಕುಷ್ಟಗಿ: ನಂದಿನಿ ಉತ್ಪನ್ನಗಳನ್ನು ಖರೀದಿಸಿ ಹೈನುಗಾರಿಕೆಗೆ ಪ್ರೋತ್ಸಾಹಿಸಿ ಎಂದು ರಾಬಕೊ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಉಪಾಧ್ಯಕ್ಷ ಶಿವಪ್ಪ ವಾದಿ ಹೇಳಿದರು.

ಪಟ್ಟಣದಲ್ಲಿ ಕರ್ನಾಟಕ ಹಾಲು ಮಹಾ ಮಂಡಳಿ ಗುರುವಾರ ಆಯೋಜಿಸಿದ್ದ ನಂದಿನಿ ಸಿಹಿ ಉತ್ಸವಕ್ಕೆ ಚಾಲನೆ ನೀಡಿ ಮಾತನಾಡಿದರು. ಕರ್ನಾಟಕ ಹಾಲು ಮಹಾ ಮಂಡಳಿಯಿಂದ 15ದಿನಗಳ ವರೆಗೆ ನಂದಿನಿ ಸಿಹಿ ಉತ್ಸವ ಆಚರಿಸಲಾಗುತ್ತಿದೆ. ಉತ್ಸವ ಮುಗಿಯುವ ವರೆಗೆ ನಂದಿನಿ ಉತ್ಪನ್ನಗಳ ಮೇಲೆ ಶೇ.10ರಿಯಾಯಿತಿ ನೀಡಲಾಗುತ್ತಿದೆ. ಗ್ರಾಹಕರು ಸದುಪಯೋಗ ಪಡೆಯಬೇಕಿದೆ ಎಂದರು.

ರಾಬಕೊ ಹಾಲು ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕ ತಿರುಪತೆಪ್ಪ ಮಾತನಾಡಿ, ರಾಯಚೂರು, ಬಳ್ಳಾರಿ ಹಾಗೂ ಕೊಪ್ಪಳ ಜಿಲ್ಲೆಯ 148 ಒಕ್ಕೂಟಗಳಲ್ಲಿ ಸಿಹಿ ಉತ್ಸವ ನಡೆಯುತ್ತಿದೆ. ನಂದಿನಿ ಉತ್ಪನ್ನಗಳಲ್ಲಿ ಒಂದಾಗಿರುವ ತೃಪ್ತಿ ಹಾಲು ಕುಷ್ಟಗಿ ತಾಲೂಕಿನಲ್ಲಿ ಅತಿ ಹೆಚ್ಚು ಮಾರಾಟವಾಗುತ್ತಿದೆ ಎಂದರು. ನಂದಿನಿ ಉತ್ಪನ್ನಗಳಲ್ಲಿ ಒಂದಾಗಿರುವ ತೃಪ್ತಿ ಹಾಲನ್ನು ಅತಿ ಹೆಚ್ಚು ಮಾರಾಟ ಮಾಡಿದ ಹಿನ್ನೆಲೆ ಪಟ್ಟಣದ ವ್ಯಾಪಾರಿ ಪ್ರಶಾಂತ ಶೇಟ್ಟರ್‌ನ್ನು ಒಕ್ಕೂಟದಿಂದ ಸನ್ಮಾನಿಸಲಾಯಿತು. ಮಾರುಕಟ್ಟೆ ವ್ಯವಸ್ಥಾಪಕ ಜಿ.ಕೆ.ಮರಿಸ್ವಾಮಿ, ಪ್ರಮುಖರಾದ ಬಸವರಾಜ ಯರದೊಡ್ಡಿ, ಮುರುಳಿಧರ, ಗವಿಸಿದ್ದಪ್ಪ, ಡಾ.ಪ್ರವೀಣ, ಜಗದೀಶ, ಶಶಿಕುಮಾರ, ರಮೇಶ ತೊಂಡಿಹಾಳ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net