

ಯಳಂದೂರು: ಯುವ ಕಾಂಗ್ರೆಸ್‌ನ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಹೊನ್ನೂರು ನಂಜುಂಡಶೆಟ್ಟಿ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ಆನ್‌ಲೈನ್‌ನಲ್ಲಿ ಈ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ 18,027 ಮತಗಳನ್ನು ಪಡೆದು ಜಯಶೀಲರಾಗಿದ್ದಾರೆ. ಹಲವು ವರ್ಷಗಳಿಂದ ಪಕ್ಷದಲ್ಲಿ ನಾನು ಗುರುತಿಸಿಕೊಂಡಿದ್ದು ಪ್ರಾಮಾಣಿಕವಾಗಿ ದುಡಿಯುತ್ತಿದ್ದೆ. ಈಗ ಯುವ ಕಾಂಗ್ರೆಸ್‌ನ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿರುವುದು ಇನ್ನಷ್ಟು ಜವಾಬ್ದಾರಿ ಹೆಚ್ಚಿಸಿದೆ. ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲೆಯ ಶಾಸಕರು, ಬ್ಲಾಕ್ ಕಾಂಗ್ರೆಸ್‌ನ ಅಧ್ಯಕ್ಷರು, ಪಕ್ಷದ ಹಿರಿಯ, ಕಿರಿಯ ಕಾರ್ಯಕರ್ತರು, ನನಗೆ ಮತ ನೀಡಿದ ಎಲ್ಲರಿಗೂ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದರು.