ಪೇರೂರು ಶ್ರೀ ಇಗ್ಗುತ್ತಪ್ಪ ದೇವಾಲಯದಲ್ಲಿ ವಾರ್ಷಿಕೋತ್ಸವ ಸಂಪನ್ನ

26.npk .1
Published on

ನಾಪೋಕ್ಲು: ಶಿವರಾತ್ರಿ ಹಬ್ಬವನ್ನು ಇಲ್ಲಿನ ವಿವಿಧ ದೇವಾಲಯಗಳಲ್ಲಿ ಬುಧವಾರ ಶ್ರದ್ದಾಭಕ್ತಿಯಿಂದ ಆಚರಿಸಲಾಯಿತು.ಸಮೀಪದ ಪೇರೂರು ಗ್ರಾಮದ ಶ್ರೀ ಇಗ್ಗುತ್ತಪ್ಪ ದೇವಾಲಯದಲ್ಲಿ ಶಿವರಾತ್ರಿ ದಿನ ವಾರ್ಷಿಕೋತ್ಸವ ನಡೆಯಿತು. ಉತ್ಸವದ ಅಂಗವಾಗಿ ವಿಶೇಷ ಪೂಜೆ ,ರುದ್ರಾಭಿಷೇಕ ಮತ್ತು ಮಹಾಪೂಜೆ ಜರುಗಿತು. ಭಕ್ತರು ಬೆಳಿಗ್ಗೆಯಿಂದಲೇ ದೇವಾಲಯಕ್ಕೆ ತೆರಳಿ ತಮ್ಮ ಇಷ್ಟಾರ್ಥ ಸಿದ್ದಿಗೆ ಪೂಜೆ ಸಲ್ಲಿಸಿದರು. ಮಧ್ಯಾಹ್ನ ಭಕ್ತರಿಂದ ತುಲಾಭಾರ ಸೇವೆಗಳನ್ನು ನಡೆಸಲಾಯಿತು. ಪೂಜೆಯ ಬಳಿಕ ಭಕ್ತರಿಗೆ ತೀರ್ಥ ಪ್ರಸಾದ ವಿತರಣೆಯ ನಂತರ ಅನ್ನಸಂತರ್ಪಣೆ ನೆರವೇರಿಸಲಾಯಿತು. ಮಧ್ಯಾಹ್ನ ಉತ್ಸವದ ಅಂಗವಾಗಿ ವಿಶೇಷವಾಗಿ ದೇವಾಲಯದ ಆವರಣದಲ್ಲಿ ಗ್ರಾಮಸ್ಥರಿಂದ ಬೊಳಕಾಟ್ ಪ್ರದರ್ಶನ ಏರ್ಪಡಿಸಲಾಯಿತು. ಬಳಿಕ ಇಗ್ಗುತ್ತಪ್ಪ ದೇವರ ಪ್ರದರ್ಶನ ನೃತ್ಯ ಬಲಿ, ಭಕ್ತಾದಿಗಳಿಂದ ಹರಕೆ ಕಾಣಿಕೆ ಒಪ್ಪಿಸಿ, ಪ್ರಸಾದ ಸ್ವೀಕರಿಸುವುದರೊಂದಿಗೆ ಶ್ರದ್ಧಾ ಭಕ್ತಿಯಿಂದ ಉತ್ಸವ ಜರುಗಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net