ಐದು ಗ್ಯಾರಂಟಿಗಳಿಂದ ರಾಜ್ಯದಲ್ಲಿ ಆರ್ಥಿಕ ಅಭಿವೃದ್ಧಿ

NPK 24 News photo 1
Published on

ನಾಪೋಕ್ಲು: ಐದು ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸುವುದರ ಮೂಲಕ ರಾಜ್ಯದಲ್ಲಿ ಆರ್ಥಿಕ ಅಭಿವೃದ್ಧಿ ಸಾಧಿಸಲಾಗುತ್ತಿವೆ ಎಂದು ಶಾಸಕ ಎ.ಎಸ್.ಪೊನ್ನಣ್ಣ ಹೇಳಿದರು.

ಬಲ್ಲಮಾವಟ್ಟಿ ಗ್ರಾಮ ಪಂಚಾಯಿತಿಯ ಸಭಾಂಗಣದಲ್ಲಿ ಬಲ್ಲಮಾವಟ್ಟಿ ವಲಯ ಕಾಂಗ್ರೆಸ್ ವತಿಯಿಂದ ಆಯೋಜಿಸಿದ್ದ ಅಭಿನಂದನಾ ಸಭೆ ಹಾಗೂ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.ಹಿಂದಿನ ಸರ್ಕಾರದ ಅವಧಿಯಲ್ಲಿ ಬಹಳಷ್ಟು ಅಭಿವೃದ್ಧಿ ಕಾರ್ಯಗಳು ಸ್ಥಗಿತಗೊಂಡಿದ್ದವು. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಗ್ರಾಮೀಣ ಭಾಗದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಂಡಿದೆ. ಕ್ಷೇತ್ರದಲ್ಲಿ ಕೈಗೊಂಡ ಅಭಿವೃದ್ಧಿ ಕಾರ್ಯಗಳನ್ನು ಜನಸಾಮಾನ್ಯರಿಗೆ ತಲುಪಿಸುವ ಕೆಲಸವನ್ನು ಕಾರ್ಯಕರ್ತರು ಮಾಡಬೇಕಿದೆ ಎಂದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀತೀರಾ ಧರ್ಮಜ ಉತ್ತಪ್ಪ ಮಾತನಾಡಿ, ಕುಡಿಯುವ ನೀರು, ಗ್ರಾಮೀಣ ರಸ್ತೆಗಳು, ಅಭಿವೃದ್ಧಿ ಕಾಮಗಾರಿಗಳು ಸೇರಿದಂತೆ ಮೂಲ ಸೌಕರ್ಯಗಳನ್ನು ಸರ್ಕಾರದ ವತಿಯಿಂದ ಕೈಗೊಳ್ಳಲಾಗುತ್ತಿದೆ. ಮತ್ತಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಯೋಜನೆ ರೂಪಿಸಲಾಗಿದೆ ಎಂದರು. ಹಿರಿಯ ಕಾಂಗ್ರೆಸ್ಸಿಗರಾದ ಮೂವೆರ ಹ್ಯಾರಿ ಸುಬ್ರಮಣಿ, ಮನವಟ್ಟಿರ ಪಾಪು ಚಂಗಪ್ಪ, ಕಾಂಗ್ರೆಸ್ ಪದಾಧಿಕಾರಿಗಳು, ಪಂಚಾಯತಿ ಸದಸ್ಯರು, ಕಾಂಗ್ರೆಸ್ ಸಮಿತಿ ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net