ಸಂಪಾಜೆ ಗ್ರಾಮದಲ್ಲಿ ವಿವಿಧ ಕಾಮಗಾರಿ ಉದ್ಘಾಟನೆ

1.npk-2.
Published on

 ನಾಪೋಕ್ಲು : ಸಂಪಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಗಡಿಕಲ್ಲು ಅಲಡ್ಕ ಮುಂಡಡ್ಕದಲ್ಲಿ ಗ್ರಾಮ ಪಂಚಾಯಿತಿ ನಿಧಿ 15 ನೇ ಹಣಕಾಸು ಉದ್ಯೋಗ ಖಾತ್ರಿ ಯೋಜನೆಯಡಿ ನಿರ್ಮಾಣಗೊಂಡ ಕಾಂಕ್ರಿಟ್ ರಸ್ತೆಯನ್ನು ಕೇಂದ್ರ ನಾರು ಮಂಡಳಿ ಮಾಜಿ ಸದಸ್ಯ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಟಿ.ಎಂ. ಶಾಹಿದ್ ತೆಕ್ಕಿಲ್ ಶನಿವಾರ ಉದ್ಘಾಟಿಸಿದರು.ಳಿಕ ಮಾತನಾಡಿದ ಅವರು, ಸಂಪಾಜೆ ಗ್ರಾಮ 2 ಬಾರಿ ಗಾಂಧಿ ಗ್ರಾಮ ಪುರಸ್ಕಾರ ಪಡೆದಿದೆ ಈ ಭಾಗದ ಜನ ಪ್ರತಿನಿಧಿಗಳು ಕ್ರಿಯಾಶೀಲರಾಗಿ ಕೆಲಸ ಮಾಡುವ ಮೂಲಕ ಅಭಿವೃದ್ಧಿಗೆ ಬೆಂಬಲಿಸಿದ್ದಾರೆಂದರು. ಗಡಿಕಲ್ಲು ಅಂಗನವಾಡಿ ಕಟ್ಟಡ, ರಸ್ತೆ ಕಾಂಕ್ರಿಟ್ ಕಾಮಗಾರಿ, ಅಂಗನವಾಡಿ ಕೇಂದ್ರದ ಕಾಂಪೌಂಡ್ ಕಾಮಗಾರಿ, ಪೆರುಂಗೋಡಿ ರಸ್ತೆ ಡಾಂಬರೀಕರಣಕ್ಕೆ ಅನುದಾನ ಒದಗಿಸಿಕೊಟ್ಟಿದ್ದೇನೆ. ಗ್ರಾಮದ ಸಮಗ್ರ ಅಭಿವೃದ್ಧಿಗೆ ಇನ್ನು ಮುಂದೂ ಸಹಕರಿಸುವೆ ಎಂದರು. ಗಡಿಕಲ್ಲು ಹಾಗೂ ಕಲ್ಲುಗುಂಡಿ ಅಂಗನವಾಡಿ ಕೇಂದ್ರದ ಶುದ್ಧ ಕುಡಿಯುವ ನೀರಿನ ವ್ಯವಸ್ಥೆಯನ್ನು ಪಿಡಿಒ ಸರಿತಾ ಡಿಸೋಜಾ , ಆನೆ ಮಲ್ಲಡ್ಕ ಕಾಂಕ್ರಿಟ್ ರಸ್ತೆಯನ್ನು ಜಿಪಂ ಮಾಜಿ ಅಧ್ಯಕ್ಷ ಜಗದೀಶ್ ರೈ , ಕೈಪಡ್ಕ ಚರಂಡಿ ಕಾಂಕ್ರೀಟ್ ಕಾಮಗಾರಿಗೆ ಪಂಚಾಯಿತಿ ಸದಸ್ಯೆ ವಿಮಲಾ ಪ್ರಸಾದ್, ಚಟ್ಟೆಕಲ್ಲು ರಸ್ತೆ ಕಾಂಕ್ರಿಟ್ ಕಾಮಗಾರಿಯನ್ನು ಗ್ರಾಪಂ ಮಾಜಿ ಅಧ್ಯಕ್ಷೆ ಸುಂದರಿ ಇದೇ ಸಂದರ್ಭ ಉದ್ಘಾಟಿಸಿದರು. ಪಂಚಾಯಿತಿ ಅಧ್ಯಕ್ಷೆ ಸುಮತಿ ಶಕ್ತಿವೇಲು, ಗ್ರಾಪಂ ಸದಸ್ಯರಾದ ಸುಂದರಿ, ರಜನಿ ಶರತ್, ವಿಮಲಾ ಪ್ರಸಾದ್, ವಿಜಯ ಕುಮಾರ್ ಅಲಡ್ಕ ಮಾಜಿ ಸದಸ್ಯರಾದ ತಾಜ್ ಮಹಮ್ಮದ್, ಸರೋಜಿನಿ ಕಡೆಪಾಲ, ಕುಸುಮಾವತಿ ಪುಟ್ಟಯ್ಯ, ದಿನಕರ ಗೌಡ ಸಣ್ಣ ಮನೆ, ಗ್ರಾಪಂ ಮಾಜಿ ಅಧ್ಯಕ್ಷ ಹಮೀದ್ ಗೂನಡ್ಕ

ಮುಖಂಡರಾದ ಲಸ್ಸಿ ಮೊನಾಲಿಸಾ, ದಿನಕರ ಗೌಡ ಸಣ್ಣಮನೆ, ಕುಸುಮಾವತಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net