

ನರಗುಂದ: ರಸ್ತೆ ಸಂಚಾರ ನಿಯಮ ಉಲ್ಲಂಘನೆಯಿಂದ ಹೆಚ್ಚು ಅಪಘಾತಗಳು ಸಂಭವಿಸುತ್ತವೆ. ವಾಹನಗಳ ಮಾಲೀಕರು ಅಪ್ರಾಪ್ತರಿಗೆ ವಾಹನ ನೀಡಬಾರದು. ದ್ವಿಚಕ್ರ ವಾಹನ ಓಡಿಸುವಾಗ ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು ಎಂದು ಶ್ರೀ ಯಡೆಯೂರು ಸಿದ್ಧಲಿಂಗೇಶ್ವರ ಕಲಾ ಹಾಗೂ ವಾಣಿಜ್ಯ ವಿದ್ಯಾಲಯದ ಪ್ರಾಚಾರ್ಯ ಆರ್.ಬಿ. ಪಾಟೀಲ ಹೇಳಿದರು.
ಪಟ್ಟಣದ ಶ್ರೀ ಯಡೆಯೂರು ಸಿದ್ಧಲಿಂಗೇಶ್ವರ ಕಲಾ ಹಾಗೂ ವಾಣಿಜ್ಯ ವಿದ್ಯಾಲಯದಲ್ಲಿ ಎನ್ಎಸ್ಎಸ್ ಘಟಕದ ಆಶ್ರಯದಲ್ಲಿ ಸ್ವಚ್ಛತಾ ಹೀ ಸೇವಾ ಅಡಿಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ರಸ್ತೆ ಸುರಕ್ಷತಾ ಜಾಥಾ ಕಾರ್ಯಕ್ರಮದಲ್ಲಿ ಮಾತನಾಡಿದರು.
ಜಾಥಾದಲ್ಲಿ ಕಾಲೇಜ್ ಸಿಬ್ಬಂದಿ, ಎನ್ಎಸ್ಎಸ್ ಕಾರ್ಯಕ್ರಮ ಅಧಿಕಾರಿ ಎಂ.ಪಿ. ಕ್ಯಾತನಗೌಡ್ರ, ಬಿಇ.ಡಿ ಮಹಾವಿದ್ಯಾಲಯದ ಎನ್ಎಸ್ಎಸ್ ಕಾರ್ಯಕ್ರಮ ಅಧಿಕಾರಿ ಮಹಾಬಲೇಶ್ವರ ವಿಶ್ವಕರ್ಮ ಹಾಗೂ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಭಾಗಿಯಾಗಿದ್ದರು.