ನಾರಾಯಣ ಗುರುಗಳ ತತ್ವ ಸಿದ್ಧಾಂತ ಅಳವಡಿಕೆ ಅಗತ್ಯ

31 Dwd 6
Published on

ಧಾರವಾಡ: ನಾರಾಯಣ ಗುರುಗಳು ಜಾತಿ ಮತ್ತು ಧರ್ಮದ ಗುರುವಲ್ಲ. ಅವರು ಲೋಕದ ಗುರು. ಅಸ್ಪೃಶ್ಯತೆ ವಿರುದ್ಧ ಹೋರಾಡಿದ ಮಹಾನ್ ನಾಯಕರು. ಅವರ ತತ್ವ ಸಿದ್ಧಾಂತ ಅಳವಡಿಕೆ ಅಗತ್ಯ ಇಂದಿನ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಹೇಳಿದರು.
ನಗರದ ಆಲೂರು ವೆಂಕಟರಾವ್ ಸಾಂಸ್ಕೃತಿಕ ಭವನದಲ್ಲಿ ಜಿಲ್ಲಾಡಳಿತದಿಂದ ಗುರುವಾರ ಆಯೋಜಿಸಿದ್ದ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ನಾರಾಯಣ ಗುರುಗಳು ಮೇಲು, ಕೀಳು ತೊಡೆದು ಹಾಕಿ ಸಮಾನತೆಯ ಸಮಾಜಕ್ಕೆ ಪ್ರಯತ್ನಿಸಿದರು. ಸಮಾಜಕ್ಕೆ ದಾರಿ ತೋರುವ ಪ್ರಯತ್ನ ಮಾಡಿದರು. ದುಶ್ಚಟಗಳನ್ನು ಬಿಟ್ಟು, ಪರಿಶುದ್ಧ ಬದುಕು ನಡೆಸುವಂತೆ ಸಮಾಜಕ್ಕೆ ಸಂದೇಶ ಕೊಟ್ಟರು. ಗುರುಗಳು ತೋರಿದ ದಾರಿಯಲ್ಲಿ ಸಾಗಿ ಅವರ ಹೆಸರಿಗೆ ಗೌರವ ಬರುವಂತೆ ನಡೆದುಕೊಂಡರೆ ಅದುವೇ ನಿಜವಾದ ಗುರುದಕ್ಷಿಣೆ ಎಂದರು.
ಬೆಂಗಳೂರಿನ ಪ್ರಗತಿ ವಿದ್ಯಾಲಯ ಸಂಸ್ಥೆಯ ಅಧ್ಯಕ್ಷ ನಾಗಕಲಾಲ ಈಳಿಗೇರ ವಿಶೇಷ ಉಪನ್ಯಾಸ ನೀಡಿದರು.
ಜಿಲ್ಲಾ ಆರ್ಯ ಈಡಿಗ ಸಂಘದ ಅಧ್ಯಕ್ಷ ಚಂದ್ರಶೇಖರ ಡವಳಗಿ, ಹುಬ್ಬಳ್ಳಿ- ಧಾರವಾಡ ನಾಮಧಾರಿ ಸಂಘದ ಅಧ್ಯಕ್ಷ ತಿಮ್ಮಪ್ಪ ನಾಯ್ಕ, ಬಿಲ್ಲವ ಸಂಘದ ಅಧ್ಯಕ್ಷ ಆನಂದ ಪೂಜಾರಿ ಮತ್ತು ಸಮುದಾಯದ ಶಂಕರ ಕೊಟ್ಟಿನ, ಶ್ರೀನಾಥ, ಬಿ.ಐ. ಈಳಿಗೇರ ಉಪಸ್ಥಿತರಿದ್ದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಸ್ವಾಗತಿಸಿದರು. ಆರತಿ ದೇವಶಿಖಾಮಣಿ ನಿರೂಪಿಸಿರು.
ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳನ್ನು ಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net